ಬಾಗಲಕೋಟೆ : ಬಾಗಲಕೋಟೆ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣಾ ಕಣ ರಂಗೇರಿದ್ದು, ಕಾಂಗ್ರೆಸ ಅಭ್ಯರ್ಥಿ ಉಮೇಶ್ ಮೇಟಿ ಅವರು ಇಂದು (ಮಾ.23) ನಾಮಪತ್ರ ಸಲ್ಲಿಕೆ ಮಾಡಿದ್ದಾರೆ.
ಬಾಗಲಕೋಟೆ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪುರ, ಬಾಗಲಕೋಟೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಸ್.ಜಿ ನಂಜಯ್ಯನಮಠ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಿದ್ದು, ಬಾಗಲಕೋಟೆ ಉಪ ಆಯುಕ್ತರ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದರು.
ನಾಮಪತ್ರ ಸಲ್ಲಿಕೆಗೂ ಮುನ್ನ ಉಮೇಶ್ ಮೇಟಿ ಅವರು ಹೊಳೆ ಆಂಜನೇಯ ದೇವಸ್ಥಾನಕ್ಕೆ ಭೇಟಿ ನೀಡಿದರು. ಬಳಿಕ ರಾಘವೇಂದ್ರ ರಾಯರ ಮಠಕ್ಕೆ ಭೇಟಿ ನೀಡಿ ದರ್ಶನ ಪಡೆದರು. ಬಳಿಕ ದಿವಂಗತ ತಂದೆ ಹೆಚ್.ವೈ ಮೇಟಿ ಅವರ ಸಮಾಧಿಗೆ ತೆರಳಿ, ಆಶೀರ್ವಾದ ಪಡೆದಕೊಂಡರು.
ಹೈಚ್‌ವೈ ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರಕ್ಕೆ ಏ.9ರಂದು ಉಪಚುನಾವಣೆ ನಡೆಯಲಿದ್ದು, ಮೇ 4ಕ್ಕೆ ಫಲಿತಾಂಶ ಹೊರಬೀಳಲಿದೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…