ಬೆಂಗಳೂರು: ಏಪ್ರಿಲ್.9ರಂದು ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನದ ದಿನದಂದು ಆ ಭಾಗದ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತು ಕರ್ನಾಟಕ ಸರ್ಕಾರವು ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಎಲ್ಲಾ ರಾಜ್ಯ ಸರ್ಕಾರಿ ಕಚೇರಿಗಳು, ಅನುದಾನಿತ ಸೇರಿದಂತೆ ಎಲ್ಲಾ ಶಾಲಾ-ಕಾಲೇಜುಗಳು, ರಾಷ್ಟ್ರೀಕೃತ ಬ್ಯಾಂಕುಗಳು, ಜೀವ ವಿಮಾನ ನಿಗಮ, ಹಣಕಾಸು ಸಂಸ್ಥೆಗಳಿಗೆ ವೇತನ ಸಹಿತ ರಜೆ ನೀಡಲಾಗಿದೆ.





