Mysore
30
few clouds

Social Media

ಶನಿವಾರ, 21 ಫೆಬ್ರವರಿ 2026
Light
Dark

ಬಾಗೇಪಲ್ಲಿ ಶಾಸಕ ಎಸ್.ಎನ್‌.ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್‌ ಆದೇಶ

ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಅವರಿಗೆ ಹೈಕೋರ್ಟ್‌ನಲ್ಲಿ ಭಾರೀ ಹಿನ್ನಡೆಯಾಗಿದೆ. ಅವರ ಚುನಾವಣಾ ಆಯ್ಕೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಅವರ ಆಯ್ಕೆಯನ್ನು ಅಸಿಂಧು ಎಂದು ಘೋಷಣೆ ಮಾಡಿದೆ.

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸುಬ್ಬಾರೆಡ್ಡಿ ವಿರುದ್ಧ ಪರಾಜಿತರಾಗಿದ್ದ ಬಿಜೆಪಿ ಅಭ್ಯರ್ಥಿ ಮುನಿರಾಜು ಅವರು ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಸುಬ್ಬಾರೆಡ್ಡಿ ಉನಾವಣಾ ಅಫಿಡವಿಟ್‌ನಲ್ಲಿ ತಮ್ಮ ಆಸ್ತಿ ಮತ್ತು ಆದಾಯದ ಬಗ್ಗೆ ತಪ್ಪು ಮಾಹಿತಿ ನೀಡಿದ್ದಾರೆ ಹಾಗೂ ಕೆಲವು ಪ್ರಮುಖ ಅಂಶಗಳನ್ನು ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಿದ್ದರು.

ನ್ಯಾ. ಕಮಲ್‌ ಅವರಿದ್ದ ಏಕಸದಸ್ಯ ಪೀಠವು ಈ ಅರ್ಜಿಯ ಸುದೀರ್ಘ ವಾದ-ವಿವಾದಗಳನ್ನು ಆಲಿಸಿ ಈ ಮಹತ್ವದ ತೀರ್ಪು ನೀಡಿದೆ.

 

 

Tags:
error: Content is protected !!