Mysore
25
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ಜಾಮೀನು ಅರ್ಜಿ ವಜಾ; ಪ್ರಜ್ವಲ್‌ ರೇವಣ್ಣ ಇನ್ನೂ ಜೈಲೇ ಗತಿ!

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಸಲ್ಲಿಸಿದ್ದ ಜಾಮೀನು ಹಾಗೂ ನೀರಿಕ್ಷಣಾ ಅರ್ಜಿಯನ್ನು ಇಂದು(ಅ.21) ಹೈಕೋರ್ಟ್‌ನ ಏಕ ಸದಸ್ಯ ಪೀಠ ವಜಾಗೊಳಿಸಿದೆ.

ಕಾಯ್ದಿರಿಸಿದ್ದ ತೀರ್ಪು ಪ್ರಕಟಿಸಿದ ಹೈಕೋರ್ಟ್ ಏಕಸದಸ್ಯ ಪೀಠ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಜಾಮೀನು ಅರ್ಜಿಯನ್ನು ವಜಾಗೊಳಿಸಿ ನಿರೀಕ್ಷಣಾ ಜಾಮೀನು ಅರ್ಜಿಯೂ ಪ್ರಕರಣದಲ್ಲಿನ ವಿಚಾರಗಳು ಘೋರವಾಗಿವೆ ಎಂದು ಉಲ್ಲೇಖಿಸಿದೆ.

ಪ್ರಜ್ವಲ್ ರೇವಣ್ಣ ಒಂದು ಪ್ರಕರಣದಲ್ಲಿ ಜಾಮೀನು ಹಾಗೂ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ವಿಚಾರಣೆ ನಡೆಸಿದ್ದ ತೀರ್ಪು ಕಾಯ್ದಿರಿಸಿದ್ದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಮೂರು ಅರ್ಜಿಗಳನ್ನು ವಜಾಗೊಳಿಸಿದೆ. ಈ ಮೂಲಕ ಪ್ರಜ್ವಲ್‌ಗೆ ಇನ್ನೂ ಜೈಲೇ ಖಾಯಂ ಆದಂತಾಗಿದೆ.

ಹೊಳೆನರಸೀಪುರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಜಾಮೀನು ಕೋರಿದ್ದರೆ, ಸಿಐಡಿ ಸೈಬರ್ ಸೆಲ್ ನಲ್ಲಿ ದಾಖಲಾಗಿದ್ದ ಇನ್ನೆರಡು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ಕೋರಿದ್ದರು. ಪರಪ್ಪನ ಅಗ್ರಹಾರದಲ್ಲಿರುವ ಪ್ರಜ್ವಲ್ ರೇವಣ್ಣ ಅವರು ನಾಲ್ಕು ತಿಂಗಳಿಂದ ನ್ಯಾಯಾಂಗ ಬಂಧನದಲ್ಲಿದ್ದಾರೆ.

Tags:
error: Content is protected !!