ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಜಾಮೀನು ರದ್ದುಗೊಳಿಸಿರುವ ಹಿನ್ನೆಲೆಯಲ್ಲಿ ಎ1 ಆರೋಪಿ ಪವಿತ್ರಾ ಗೌಡರನ್ನು ಪೊಲೀಸರು ಬಂಧಿಸಿದ್ದಾರೆ.
ರಾಜರಾಜೇಶ್ವರಿ ನಗರದ ಮನೆಯಲ್ಲೇ ಗೋವಿಂದರಾಜನಗರ ಪಿಐ ಸುಬ್ರಹ್ಮಣ್ಯ ನೇತೃತ್ವದಲ್ಲಿ ಪವಿತ್ರಾಗೌಡರನ್ನು ಬಂಧಿಸಲಾಗಿದೆ.
ಸುಪ್ರೀಂಕೋರ್ಟ್‌ನಲ್ಲಿ ಜಾಮೀನು ರದ್ದುಗೊಳಿಸಿ ಸುಪ್ರೀಂಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಪವಿತ್ರಾಗೌಡ ನಿವಾಸಕ್ಕೆ ಪೊಲೀಸರು ಆಗಮಿಸಿದ್ದರು. ಇಂದು ಮಧ್ಯಾಹ್ನದ ವೇಳೆಗೆ ಪವಿತ್ರಾ ಗೌಡ ಬಂಧನವಾಗಿದ್ದು, ವೈದ್ಯಕೀಯ ಪರೀಕ್ಷೆ ನಡೆಸಿ ಕೋರ್ಟ್‌ಗೆ ಹಾಜರುಪಡಿಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಎ-12 ಪ್ರದೋಷ್ ಹಾಗೂ ಎ14 ಲಕ್ಷ್ಮಣ್, ಎ11 ನಾಗರಾಜು ಅಲಿಯಾಸ್ ನಾಗನನ್ನು ಸಹ ಪೊಲೀಸರು ಬಂಧಿಸಿದ್ದಾರೆ.





