Mysore
21
overcast clouds

Social Media

ಸೋಮವಾರ, 07 ಅಕ್ಟೋಬರ್ 2024
Light
Dark

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.

2 ಲಕ್ಷದ ಬಾಂಡ್, ಇಬ್ಬರು ಶ್ಯೂರಿಟಿ, ಸಾಕ್ಷ್ಯಾಧಾರ ನಾಶಪಡಿಸಬಾರದು, ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ, ಪೊಲೀಸರು ವಿಚಾರಣೆಗೆ ಕರೆದಾಗ ಹಾಜರಾಗಬೇಕು ಎಂಬ ಷರತ್ತು ವಿಧಿಸಿ ಬೆಂಗಳೂರಿನ 82 ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ.

ಸದ್ಯ ಮುನಿರತ್ನ ಪರ ವಕೀಲರು ಜಾಮೀನು ಷರತ್ತು ಪೂರೈಸುತ್ತಿದ್ದು, ಇಂದು ಸಂಜೆ ಜೈಲಿನಿಂದ ಮುನಿರತ್ನ ಬಿಡುಗಡೆಯಾಗುವ ಸಾಧ್ಯತೆ ಇದೆ. ಆದರೆ, ಬಿಡುಗಡೆಯಾದರೂ ಸಹ ಅತ್ಯಾಚಾರ ಕೇಸ್‌ನಲ್ಲಿ ಮತ್ತೆ ಬಂಧನ ಸಾಧ್ಯತೆ ಇದೆ ಎನ್ನಲಾಗಿದೆ.

ಅತ್ಯಾಚಾರ ಕೇಸ್‌ನಲ್ಲಿ ಮತ್ತೆ ಬಂಧನ ಸಾಧ್ಯತೆ
ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಈಗಾಗಲೇ ಎರಡು ಕೇಸ್‌ ದಾಖಲಾಗಿಸಲಾಗಿದೆ. ಮುನಿರತ್ನ ಗನ್‌ ಮ್ಯಾನ್‌ ವಿಜಯ ಕುಮಾರ್‌, ಸುಧಾಕರ್‌, ಕಿರಣ್‌ ಕುಮಾರ್‌, ಲೋಹಿತ್‌ ಗೌಡ, ಮಂಜುನಾಥ್‌ ಹಾಗೂ ಲೋಕಿ ಸೇರಿದಂತೆ ಶಾಸಕ ಮುನಿರತ್ನ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್‌ ದಾಖಲಾಗಿದೆ.

ಈ ಸಂಬಂಧ ಕೃತ್ಯ ನಡೆದ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲೀಪುರ ಪೊಲೀಸ್‌ ಠಾಣೆಯಲ್ಲಿ ಸಂತ್ರಸ್ತೆ ಬುಧುವಾರ ಅತ್ಯಾಚಾರ ದೂರು ನೀಡಿದ್ದಾರೆ. ಸಮಾಜ ಸೇವಕಿಯಾಗಿ ಗುರಿತಿಸಿಕೊಂಡಿರುವ ಸಂತ್ರಸ್ತೆ, ಬಿಜೆಪಿಯ ಸಕ್ರಿಯ ಕಾರ್ಯಕರ್ತೆ, ತನ್ನ ಮೇಲೆ 2020ರಿಂದ 2022ರವರೆಗೆ ನಿರಂತರ ಅತ್ಯಾಚಾರ ನಡೆಸಿ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿದ್ದಾರೆ ಎಂದು ಮುನಿರತ್ನ ವಿರುದ್ಧ ದೂರು ನೀಡಿದ್ದಾರೆ.

ಡಿವೈಎಸ್‌ಪಿ ದಿನಕರ್‌ ಶೆಟ್ಟಿ ನೇತೃತ್ವದಲ್ಲಿ ಜೆ.ಪಿ ಪಾರ್ಕ್‌ ಬಳಿಯ ಗೋಡೌನ್‌ ನಲ್ಲಿ ಸಂತ್ರಸ್ತೆಯ ಸ್ಥಳ ಮಹಜರು ನಡೆಸಲಾಗಿದೆ. ಈ ಪ್ರಕರಣದ ಸಂಬಂಧ ರಾಮನಗರ ಪೊಲೀಸರು ಮುನಿರತ್ನ ಅವರನ್ನು ಬಂಧಿಸುವ ಸಾಧ್ಯತೆ ಇದೆ.

 

 

Tags: