ರಾಜ್ಯ

ಶಾಸಕ ಮುನಿರತ್ನಗೆ ಜಾಮೀನು: ಅತ್ಯಾಚಾರ ಪ್ರಕರಣದಲ್ಲಿ ಮತ್ತೆ ಬಂಧನ ಸಾಧ್ಯತೆ

ಬೆಂಗಳೂರು: ಗುತ್ತಿಗೆದಾರರೊಬ್ಬರಿಗೆ ಜಾತಿನಿಂದನೆ ಹಾಗೂ ಪ್ರಾಣ ಬೆದರಿಕೆ ಹಾಕಿದ ಪ್ರಕರಣದಲ್ಲಿ ಬೆಂಗಳೂರಿನ ರಾಜರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಲಯ ಷರತ್ತು ಬದ್ಧ ಜಾಮೀನು ನೀಡಿದೆ.

2 ಲಕ್ಷದ ಬಾಂಡ್, ಇಬ್ಬರು ಶ್ಯೂರಿಟಿ, ಸಾಕ್ಷ್ಯಾಧಾರ ನಾಶಪಡಿಸಬಾರದು, ಸಾಕ್ಷಿಗಳಿಗೆ ಬೆದರಿಕೆ ಹಾಕದಂತೆ, ಪೊಲೀಸರು ವಿಚಾರಣೆಗೆ ಕರೆದಾಗ ಹಾಜರಾಗಬೇಕು ಎಂಬ ಷರತ್ತು ವಿಧಿಸಿ ಬೆಂಗಳೂರಿನ 82 ನೇ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಆದೇಶ ಹೊರಡಿಸಿದ್ದಾರೆ.

ಸದ್ಯ ಮುನಿರತ್ನ ಪರ ವಕೀಲರು ಜಾಮೀನು ಷರತ್ತು ಪೂರೈಸುತ್ತಿದ್ದು, ಇಂದು ಸಂಜೆ ಜೈಲಿನಿಂದ ಮುನಿರತ್ನ ಬಿಡುಗಡೆಯಾಗುವ ಸಾಧ್ಯತೆ ಇದೆ. ಆದರೆ, ಬಿಡುಗಡೆಯಾದರೂ ಸಹ ಅತ್ಯಾಚಾರ ಕೇಸ್‌ನಲ್ಲಿ ಮತ್ತೆ ಬಂಧನ ಸಾಧ್ಯತೆ ಇದೆ ಎನ್ನಲಾಗಿದೆ.

ಅತ್ಯಾಚಾರ ಕೇಸ್‌ನಲ್ಲಿ ಮತ್ತೆ ಬಂಧನ ಸಾಧ್ಯತೆ
ಬಿಜೆಪಿ ಶಾಸಕ ಮುನಿರತ್ನಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಈಗಾಗಲೇ ಎರಡು ಕೇಸ್‌ ದಾಖಲಾಗಿಸಲಾಗಿದೆ. ಮುನಿರತ್ನ ಗನ್‌ ಮ್ಯಾನ್‌ ವಿಜಯ ಕುಮಾರ್‌, ಸುಧಾಕರ್‌, ಕಿರಣ್‌ ಕುಮಾರ್‌, ಲೋಹಿತ್‌ ಗೌಡ, ಮಂಜುನಾಥ್‌ ಹಾಗೂ ಲೋಕಿ ಸೇರಿದಂತೆ ಶಾಸಕ ಮುನಿರತ್ನ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್‌ ದಾಖಲಾಗಿದೆ.

ಈ ಸಂಬಂಧ ಕೃತ್ಯ ನಡೆದ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲೀಪುರ ಪೊಲೀಸ್‌ ಠಾಣೆಯಲ್ಲಿ ಸಂತ್ರಸ್ತೆ ಬುಧುವಾರ ಅತ್ಯಾಚಾರ ದೂರು ನೀಡಿದ್ದಾರೆ. ಸಮಾಜ ಸೇವಕಿಯಾಗಿ ಗುರಿತಿಸಿಕೊಂಡಿರುವ ಸಂತ್ರಸ್ತೆ, ಬಿಜೆಪಿಯ ಸಕ್ರಿಯ ಕಾರ್ಯಕರ್ತೆ, ತನ್ನ ಮೇಲೆ 2020ರಿಂದ 2022ರವರೆಗೆ ನಿರಂತರ ಅತ್ಯಾಚಾರ ನಡೆಸಿ, ಹನಿಟ್ರ್ಯಾಪ್‌ಗೆ ಬಳಸಿಕೊಂಡಿದ್ದಾರೆ ಎಂದು ಮುನಿರತ್ನ ವಿರುದ್ಧ ದೂರು ನೀಡಿದ್ದಾರೆ.

ಡಿವೈಎಸ್‌ಪಿ ದಿನಕರ್‌ ಶೆಟ್ಟಿ ನೇತೃತ್ವದಲ್ಲಿ ಜೆ.ಪಿ ಪಾರ್ಕ್‌ ಬಳಿಯ ಗೋಡೌನ್‌ ನಲ್ಲಿ ಸಂತ್ರಸ್ತೆಯ ಸ್ಥಳ ಮಹಜರು ನಡೆಸಲಾಗಿದೆ. ಈ ಪ್ರಕರಣದ ಸಂಬಂಧ ರಾಮನಗರ ಪೊಲೀಸರು ಮುನಿರತ್ನ ಅವರನ್ನು ಬಂಧಿಸುವ ಸಾಧ್ಯತೆ ಇದೆ.

 

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ವಿಶ್ವಸಂಸ್ಥೆ: ಇಂಟರ್‌ನಲ್‌ ಜಸ್ಟೀಸ್‌ ಕೌನ್ಸಿಲ್‌ ಮುಖ್ಯಸ್ಥರಾಗಿ ಮದನ್‌ ಬಿ.ಲೋಕುರ್‌ ಆಯ್ಕೆ

ನವದೆಹಲಿ/ನ್ಯೂಯಾರ್ಕ್‌: ವಿಶ್ವಸಂಸ್ಥೆಯ ಇಂಟರ್‌ನಲ್‌ ಜಸ್ಟೀಸ್‌ ಕೌನ್ಸಿಲ್‌ನ (ಆಂತರಿಕ ನ್ಯಾಯ ಮಂಡಳಿ) ಮುಖ್ಯಸ್ಥರಾಗಿ ಭಾರತದ ಸುಪ್ರೀಂ ಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಮದನ್‌…

5 mins ago

ಹಲವು ಪ್ರಥಮಗಳಿಗೆ ಮಂಡ್ಯ ಸಾಕ್ಷಿ: ಪ್ರೊ.ಎಂ.ಕೃಷ್ಣೇಗೌಡ

ಮಂಡ್ಯ: ಜಿಲ್ಲೆಯ ಚರಿತ್ರೆ, ಸಾಮಾಜಿಕ ವಿಚಾರ ನೋಡಿದರೆ ಹಲವಾರು ಪ್ರಥಮಗಳನ್ನು ಮಂಡ್ಯ ದಾಖಲಿಸಿದೆ. ಮೈಸೂರಿನಿಂದ ಪ್ರತ್ಯೇಕವಾದ ಮೇಲೂ ಹಲವು ಅದ್ಭುತಗಳನ್ನು…

6 mins ago

ಡಾ.ಬಿ.ಆರ್‌.ಅಂಬೇಡ್ಕರ್‌ ಹೆಸರಿನಲ್ಲಿ ಸ್ಕಾಲರ್‌ಶಿಪ್‌ ಯೋಜನೆ ಘೋಷಣೆ: ದೆಹಲಿ ಮಾಜಿ ಸಿಎಂ ಅರವಿಂದ್‌ ಕೇಜ್ರಿವಾಲ್‌

ನವದೆಹಲಿ: ಡಾ.ಬಿ.ಆರ್‌.ಅಂಬೇಡ್ಕರ್‌ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸದನದಲ್ಲಿ ಅಗೌರವದ ಹೇಳಿಕೆ ನೀಡಿರುವುದಕ್ಕೆ ದೇಶಾದ್ಯಂತ ಆಕ್ರೋಶ…

29 mins ago

ಐಪಿಎಲ್‌ 2025: ದೇಶೀಯ ಮಿನಿ ಚುಟುಕು ಟಿ20 ಕ್ರಿಕೆಟ್‌ ಹಬ್ಬ ಆರಂಭಕ್ಕೆ ದಿನಾಂಕ ನಿಗದಿ

ದೇಶಿಯ ಮಿನಿ ಚುಟುಕು ಕ್ರಿಕೆಟ್‌ ಟೂರ್ನಿಗಳಲ್ಲಿ ಯಶಸ್ಸು ಕಂಡಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌), ಸೀಸನ್‌ 18ರ ಆರಂಭಕ್ಕೆ ದಿನಾಂಕ…

37 mins ago

ಸಿ.ಟಿ.ರವಿ ವಿರುದ್ಧ ಕಾನೂನು ಕ್ರಮ ಅಗತ್ಯ: ಸಚಿವ ದಿನೇಶ್‌ ಗುಂಡೂರಾವ್‌

ಬೆಂಗಳೂರು: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಬಗ್ಗೆ ಎಂಎಲ್‌ಸಿ ಸಿ.ಟಿ.ರವಿ ಅವರು ಆಕ್ಷೇಪಾರ್ಹ ಹೇಳಿಕೆ ನೀಡಿದ್ದು, ಅವರ ವಿರುದ್ಧ ಅಗತ್ಯವಾಗಿ ಕಾನೂನು…

47 mins ago

ಮಳವಳ್ಳಿ ಬಳಿ ರಸ್ತೆ ಅಪಘಾತ: ಮೂವರು ವಿದ್ಯಾರ್ಥಿಗಳು ಸಾವು, ಓರ್ವನ ಗಂಭೀರ

ಮಂಡ್ಯ: ಪ್ರಾಜೆಕ್ಟ್‌ ವರ್ಕ್‌ ಜೊತೆಯಲ್ಲಿ ಪ್ರವಾಸ ಮಾಡಲೆಂದು ಹೊರಟಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿಗಳು ರಸ್ತೆ ಅಪಘಾತದಲ್ಲಿ‌ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯ…

1 hour ago