Mysore
22
broken clouds

Social Media

ಶುಕ್ರವಾರ, 02 ಜನವರಿ 2026
Light
Dark

ಮಹೇಶ್‌ ಶೆಟ್ಟಿ ತಿಮರೋಡಿಗೆ ಜಾಮೀನು ಮಂಜೂರು

mahesh timarotti

ಉಡುಪಿ : ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್‌ ಸಂತೋಷ್‌ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಬಂಧನಕ್ಕೊಳಗಾಗಿದ್ದ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಟಿ ಅವರಿಗೆ ಹೆಚ್ಚುವರಿ ಸಿವಿಲ್‌ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಇನ್ಮುಂದೆ ಯಾವುದೇ ನ್ಯೂಸ್‌ ಸೆನ್ಸ್‌ ಮಾಡಕೂಡದು ಎಂದು ಎಚ್ಚರಿಸಿ, ಜಾಮೀನು ಮಂಜೂರು ಮಾಡಿದೆ.

ಮಹೇಶ್​ ಶೆಟ್ಟಿ ತಿಮರೋಡಿ ಪರ ವಕೀಲ ವಿಜಯ ವಾಸು ಪೂಜಾರಿ ವಾದ ಮಂಡಿಸಿದರು. ಬಂಧಿಸಿದ ಪ್ರಕ್ರಿಯೆ ಕ್ರಮಬದ್ಧವಾಗಿಲ್ಲ. ಪ್ರಥಮ ನೋಟಿಸ್ ನೀಡಿ ಅದರ ಅವಧಿ ಮುಗಿಯುವ ಮುನ್ನವೇ ಎರಡನೇ ನೋಟಿಸ್ ನೀಡಿದ್ದಾರೆ. ತಿಮರೋಡಿಯವರ ಹೇಳಿಕೆಯಿಂದ ಯಾವುದೇ ಕೋಮು ಗಲಭೆಗಳು ಆಗಿಲ್ಲ. ತಿಮರೋಡಿ ಕೂಡ ಓರ್ವ ಹಿಂದೂ ನಾಯಕ. ಇನ್ನೊಂದು ಧರ್ಮವನ್ನು ಅವರು ದೂಷಿಸಿಲ್ಲ ಎಂದು ಪೀಠಕ್ಕೆ ತಿಳಿಸಿದರು.

Tags:
error: Content is protected !!