satishc sail
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಸತೀಶ್ ಸೈಲ್ ಅವರ ಮಧ್ಯಂತರ ಜಾಮೀನು ರದ್ದುಪಡಿಸಲಾಗಿದೆ.
ಬೆಲೇಕೇರಿ ಬಂದರಿನಿಂದ ಅಕ್ರಮ ಅದಿರು ಸಾಗಾಟ ಪ್ರಕರಣದಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿದ್ದ ಸತೀಶ್ ಸೈಲ್ ಅವರಿಗೆ ನವೆಂಬರ್.7ರವರೆಗೆ ಜಾಮೀನು ವಿಸ್ತರಣೆ ಮಾಡಲಾಗಿತ್ತು. ನಿನ್ನೆ ಅವರ ಜಾಮೀನು ರದ್ದು ಮಾಡಲಾಗಿದ್ದು, ಸತೀಶ್ ಸೈಲ್ ಮತ್ತೆ ಜೈಲು ಸೇರುವಂತಾಗಿದೆ.
ಇದನ್ನು ಓದಿ: ಶಾಸಕ ಸತೀಶ್ ಸೈಲ್ ಬಂಧನ: ಕಾಂಗ್ರೆಸ್ಸಿಗರೇ ಟಾರ್ಗೆಟ್ ಎಂದ ಡಿಸಿಎಂ ಡಿ.ಕೆ.ಶಿವಕುಮಾರ್
ಅಕ್ರಮ ಅದಿರು ಸಾಗಣೆ ಪ್ರಕರಣದಲ್ಲಿ ಶಾಸಕರು ಜೈಲು ಪಾಲಾಗಿದ್ದರು. ಅವರ ಮನೆ ಮೇಲೆ ಇಡಿ ದಾಳಿ ನಡೆಸಿತ್ತು. ಆರೋಗ್ಯದ ಸಮಸ್ಯೆ ಹಿನ್ನೆಲೆಯಲ್ಲಿ ಇಡಿ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದರು. ಅಕ್ಟೋಬರ್.25ರವರೆಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಚಿಕಿತ್ಸೆ ಕಾರಣದಿಂದ ಜಾಮೀನು ವಿಸ್ತರಿಸುವಂತೆ ಮಾಡಿದ್ದ ಮನವಿಯನ್ನು ಪರಿಗಣಿಸಿ ನವೆಂಬರ್.7ರವರೆಗೆ ಜಾಮೀನು ವಿಸ್ತರಿಸಲಾಗಿತ್ತು.
ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಶಿಕ್ಷೆಗೊಳಗಾಗಿ ಹೈಕೋರ್ಟ್‌ನಿಂದ ತಡೆಯಾಜ್ಞೆ ಪಡೆದುಕೊಂಡಿದ್ದರು. ನಿನ್ನೆ ಜಾಮೀನು ರದ್ದುಪಡಿಸಲಾಗಿದ್ದು, ಮತ್ತೆ ಜೈಲು ಸೇರುವಂತಾಗಿದೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…