ಚಿತ್ರದುರ್ಗ:- ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧನದ ಭೀತಿ ಎದುರಿಸುತ್ತಿರುವ ಚಿತ್ರದುರ್ಗ ಮುರುಘಾ ಮಠದ ಡಾ. ಶಿವಮೂರ್ತಿ ಶರಣರು ಜಾಮೀನು ಅರ್ಜಿ ಸಲ್ಲಿಸಿದ್ದು, ಸೆ.1 ರಂದು ಅವರ ಭವಿಷ್ಯ ನಿರ್ಧಾರವಾಗಲಿದೆ.
ಸೋಮವಾರ ಜಿಲ್ಲಾ ಸೆಷನ್ಸ್ ನ್ಯಾಯಾಲಯಕ್ಕೆ ಶಿವಮೂರ್ತಿ ಶರಣರ ಪರವಾಗಿ ವಕೀಲರಾದ ಎಂ. ಉಮೇಶ್, ಹಾಗೂ ಎಸ್.ಶಂಕರಪ್ಪ ಜಾಮೀನಿಗೆ ಅರ್ಜಿ ಸಲ್ಲಿಸಿದರು.
ನಿರೀಕ್ಷಣಾ ಜಾಮೀನು ಅರ್ಜಿ ಸ್ವೀಕರಿಸಿದ ಚಿತ್ರದುರ್ಗ ಜಿಲ್ಲಾ 2ನೇ ಹೆಚ್ಚುವರಿ ನ್ಯಾಯಾಲಯ ಸೆಪ್ಟೆಂಬರ್ 1ಕ್ಕೆ ಜಾಮೀನು ಅರ್ಜಿ ವಿಚಾರಣೆಯನ್ನು ಮುಂದೂಡಿದೆ.
ಇದೇ ಸಂದರ್ಭದಲ್ಲಿ ಇಬ್ಬರು ಬಾಲಕಿಯರಿಗೂ ನ್ಯಾಯಾಲಯವುನೋಟಿಸ್ ಜಾರಿ ಮಾಡಿದೆ.
ಖುದ್ದಾಗಿ ಹಾಜರಾಗಿ ಜಾಮೀನು ಕೊಡಬೇಕಾ ಬೇಡವೇ ಎಂದು ಹೇಳಲು ನೋಟಿಸ್ ನೀಡಿದೆ. ಸೆಪ್ಟೆಂಬರ್ 1ರಂದು ಕೋರ್ಟ್ಗೆ ಹಾಜರಾಗುವಂತೆ ಬಾಲಕಿಯರಿಗೆ ನೋಟಿಸ್ ರವಾನಿಸಲಾಗಿದೆ.
ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಶ್ರೀಗಳನ್ನು ಯಾವುದೇ ಕ್ಷಣದಲ್ಲೂ ಬಂಧಿಸುವ ಸಾಧ್ಯತೆ ಇದೆ.
ಇನ್ನು ತಮ್ಮ ವಿರುದ್ಧದ ಆರೋಪಗಳನ್ನು ಸ್ಪಷ್ಟವಾಗಿ ತಳ್ಳಿಹಾಕಿರುವ ಮುರುಘಾ ಶ್ರೀಗಳು, ನನ್ನ ವಿರುದ್ಧ ಪಿತೂರಿ ನಡೆದಿದೆ. ಇದೇನು ಹೊಸದಲ್ಲ, ಕಳೆದ 15 ವರ್ಷದಿಂದ ನಡೆಯುತ್ತಿದೆ. ನಮ್ಮ ಮಠ ನ್ಯಾಯ ದೇಗುಲದಂತಿತ್ತು. ಇದೀಗ ಮಠದ ವಿರುದ್ಧ ಷಡ್ಯಂತ್ರ ನಡೆಯುತ್ತಿದೆ ಎಂದು ಹೇಳಿದ್ದಾರೆ.
ಸೋಮವಾರ ಬೆಳಗ್ಗೆ ಶ್ರೀಗಳು ಮಠಕ್ಕೆ ಬರುತ್ತಿದ್ದಂತೆ ಹಲವು ಸ್ವಾಮೀಜಿಗಳು ಹಾಗೂ ಸಮುದಾಯದ ಮಖಂಡರ ಜೊತೆ ಸಭೆ ನಡೆಸಿದರು. ಸುಮಾರು 10ಕ್ಕೂ ಹೆಚ್ಚು ಸ್ವಾಮೀಜಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ನಿಮ್ಮ ಜೊತೆ ನಾವಿದ್ದೀವಿ. ಎಲ್ಲರೂ ಜೊತೆಯಾಗಿ ಕಾನೂನು ಹೋರಾಟ ಮಾಡೋಣ. ಏನೇ ಆಗಲಿ ಇದರ ಹಿಂದೆ ಇರುವ ಕಿಡಿಗೇಡಿಗಳನ್ನ ಬಿಡಬಾರದು. ಅವರಿಗೆ ಒಂದು ಬುದ್ದಿ ಕಲಿಸಬೇಕು ಎಂದು ಶ್ರೀಗಳಿಗೆ ಧೈರ್ಯ ತುಂಬಿದ್ದಾರೆ.
ಚಿತ್ರದುರ್ಗದ ಮುರುಘಾ ಮಠದ ಶಾಲೆಯಲ್ಲಿ ಓದುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರು ಶ್ರೀಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆಂದು ಆರೋಪಿಸಿ ದೂರು ದಾಖಲಿಸಿದ್ದಾರೆ.
ಮೈಸೂರಿನ ಒಡನಾಡಿ ಸಂಸ್ಥೆ ಮೂಲಕ ದೂರು ದಾಖಲಿಸಿದ್ದರು.
ಶಿವಮೂರ್ತಿ ಶರಣರು ಸೇರಿ ಐವರ ವಿರುದ್ದ ದೂರು ದಾಖಲಾಗಿದೆ. ಉಳಿದ ನಾಲ್ವರು ಲೈಂಗಿಕ ದೌರ್ಜನ್ಯ ಎಸಗಲು ಸ್ವಾಮೀಜಿಗೆ ಸಹಾಯ ಮಾಡುತ್ತಿದ್ದರು. ನಮ್ಮ ಬಳಿ ದೂರು ಬರುತ್ತಿದ್ದಂತೆ, ಬಹಳಷ್ಟು ಒತ್ತಡಗಳು ಬಂದಿವೆ. ನಾವು ಅದಾವುದನ್ನೂ ಲೆಕ್ಕಿಸದೆ ಮಕ್ಕಳಿಗೆ ನ್ಯಾಯ ಒದಗಿಸಲಷ್ಟೇ ಹೆಜ್ಜೆ ಇಟ್ಟಿದ್ದೇವೆ.
ಪ್ರಕರಣದ ಬಗ್ಗೆ ನ್ಯಾಯಾಂಗ ತನಿಖೆಗೆ ಒಪ್ಪಿಸುವಂತೆ ಆಗ್ರಹಿಸುತ್ತಿದ್ದೇವೆ. ಈ ಪ್ರಕರಣ ಗಂಭೀರ ಸ್ವರೂಪದ್ದಾಗಿರುವ ಕಾರಣ ನ್ಯಾಯಾಧೀಶರ ಮೂಲಕವೇ ತನಿಖೆ ಆಗಬೇಕು. ಸ್ವಾಮೀಜಿಯವರಿಗೆ ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಅತ್ಯಂತ ಪ್ರಭಾವಿಗಳಾಗಿದ್ದಾರೆ. ಮಕ್ಕಳು ಅಷ್ಟು ದೂರದಿಂದ ಇಲ್ಲಿಗೆ ಬಂದಿರುವ ಕಾರಣ
ನ್ಯಾಯ ಸಿಗುತ್ತೆ ಎಂಬ ಭರವಸೆಯಿಂದ. ಈ ಕಾರಣಕ್ಕಾಗಿ ಮಕ್ಕಳ ಜೊತೆ ನಾವಿದ್ದೇವೆ ಎಂದು ಒಡನಾಡಿ ಸಂಸ್ಥೆ ತಿಳಿಸಿದೆ.
ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಶರಣ ಸ್ವಾಮೀಜಿ ಸೇರಿದಂತೆ ಹಲವರ ವಿರುದ್ಧ ಬಾಲಕಿಯರು ನೀಡಿರುವ ಹೇಳಿಕೆ ಯನ್ನು ಆಧರಿಸಿ ಮಕ್ಕಳ ಕಲ್ಯಾಣ ಸಮಿತಿ ದೂರು ನೀಡಿದ ಬೆನ್ನಲ್ಲೇ ಎಫ್ಐಆರ್ ಅನ್ನು ದಾಖಲಿಸಲಾಗಿತ್ತು.
ಡಾ. ಶಿವಮೂರ್ತಿ ಮುರುಘಾ ಸ್ವಾಮೀಜಿ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಎಸಗಿ ದೂರು ನೀಡಿರುವ ಶಾಲಾ ಬಾಲಕಿಯರ ಆಪ್ತರು ಒಳಗೊಂಡಂತೆ ಮಠದ ಹಲವು ವಿದ್ಯಾರ್ಥಿಗಳ ಹೇಳಿಕೆಯನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಇಬ್ಬರ ಶಾಲಾ ಬಾಲಕಿಯರು ಡಾ. ಶಿವಮೂರ್ತಿ ಮುರುಘಾ ಶರಣರು ನೀಡಿರುವ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಪ್ರಭಾವಿಗಳು ಒಡನಾಡಿ ಸ್ವಯಂ ಸೇವಾ ಸಂಸ್ಥೆಗೆ ಒತ್ತಡ ಹಾಕಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ ಎಂದು ಒಡನಾಡಿ ಸಂಸ್ಥೆಯ ಮುಖ್ಯಸ್ಥರಾದ ಪರುಶುರಾಂ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದರು.
ಸೋಮವಾರ ಬೆಳಗ್ಗೆ ಮಠಕ್ಕೆ ಪೊಲೀಸರು ಭೇಟಿ ನೀಡಿದ್ದರು. ಈ ವೇಳೆ ಅವರು ಅಲ್ಲಿಂದ ಅಜ್ಞಾತ ಸ್ಥಳಕ್ಕೆ ತೆರಳಿದ್ದರು ಎನ್ನಲಾಗಿದೆ. ತಕ್ಷಣವೇ ಕಾರ್ಯೊನ್ಮುಖ ಚಿತ್ರದುರ್ಗ ಗ್ರಾಮಾಂತರ ಪೆÇಲೀಸರು ಅವರ ಕಾರನ್ನು ಹಿಂಬಾಲಿಸಿ ವಾಪಸ್ ಕರೆತಂದಿದ್ದರೆ. ನಿಯಮಾನುಸಾರ ಶ್ರೀಳಿಗೆ ನೋಟಿಸ್ ಜಾರಿ ಮಾಡಲಾಗಿದೆ.
ಮುರುಘಾ ಮಠದ ಶಿವಮೂರ್ತಿ ಶರಣರ ವಿರುದ್ಧ ಪೋಕ್ದೋ ಕಾಯ್ದೆಯಡಿ ಮೈಸೂರಿನ ನಜರಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಲೈಂಗಿಕ ಕಿರುಕುಳ ಸಂಬಂಧ ಬಾಲಕಿಯರು ಶ್ರೀಗಳ ವಿರುದ್ಧ ಆರೋಪ ಮಾಡಿ ಒಡನಾಡಿ ಸಂಸ್ಥೆ ಮೂಲಕ ಪೊಲೀಸ್ ಠಾಣೆಗೆ ದೂರು ನೀಡಿದ್ದರು.
- ಮುಖಪುಟ
- ಮೈಸೂರು
- ಜಿಲ್ಲೆಗಳು
- ರಾಜ್ಯ
- ದೇಶ- ವಿದೇಶ
- ರಾಜಕೀಯ
- ಅಪರಾಧ
- ಮಹಿಳೆ
- ಕೃಷಿ
- ವಿಜ್ಞಾನ ತಂತ್ರಜ್ಞಾನ
- ಕ್ರೀಡೆ
- ವಾಣಿಜ್ಯ
- ಚಿತ್ರಸಂತೆ
- ವಿಶೇಷ
- ಆಂದೋಲನ ಪುರವಣಿ
- ಎಡಿಟೋರಿಯಲ್
- ಆಂದೋಲನ 50
- ಜಾಹೀರಾತು
- Cricket
Subscribe to Updates
Get the latest creative news from FooBar about art, design and business.
Previous Articleಗಣೇಶ ಹಬ್ಬದ ದಿನದಂದು ಮಾಂಸ ಮಾರಾಟ ನಿಷೇಧ
Next Article ಮುರುಘಾ ಶ್ರೀ ಪ್ರಕರಣ: ಮಕ್ಕಳ ಆಯೋಗದಿಂದ ತನಿಖೆ