Mysore
27
scattered clouds

Social Media

ಸೋಮವಾರ, 26 ಜನವರಿ 2026
Light
Dark

ನೇಪಾಳದಲ್ಲಿ ಫೇಸ್ಬುಕ್‌, ಎಕ್ಸ್‌ ಸೇರಿದಂತೆ 26 ಸೋಶಿಯಲ್‌ ಮೀಡಿಯಾಗೆ ನಿಷೇಧ

social media ban

ಕಠ್ಮಂಡು : ನೇಪಾಳದಲ್ಲಿ ಫೇಸ್ಬುಕ್, ಎಕ್ಸ್, ಯೂಟ್ಯೂಬ್ ಸೇರಿದಂತೆ 26 ಸಾಮಾಜಿ ಜಾಲತಾಣದ ಮಾಧ್ಯಮಗಳಿಗೆ ನಿಷೇಧ ಹೇರಲಾಗಿದೆ.

ನೇಪಾಳದಲ್ಲಿ ಅಧಿಕೃತವಾಗಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರೆ ಮಾತ್ರ ಬಳಕೆಗೆ ಅವಕಾಶ ನೀಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಸರ್ಕಾರ ನಿರ್ಧಾರ ಕೈಗೊಂಡಿದೆ.

ಸ್ಥಳೀಯ ಮಟ್ಟದಲ್ಲಿ ನೋಂದಣಿಯಾಗಿರಲಿಲ್ಲ. ಜಾಹೀರಾತುಗಳ ಮೇಲೆ ಸರ್ಕಾರದ ನಿಯಂತ್ರಣ ಇರಲಿಲ್ಲ. ಈ ಬಗ್ಗೆ ಸುಪ್ರೀಂ ಕೋರ್ಟ್‍ನಲ್ಲಿ ವಿಚಾರಣೆ ನಡೆದಿತ್ತು. ಸ್ಥಳೀಯ ನೋಂದಣಿವರೆಗೂ ಬಳಕೆಗೆ ತಡೆ ಹಾಕುವಂತೆ ಕೋರ್ಟ್ ಸೂಚಿಸಿತ್ತು.

ಇದರ ಬೆನ್ನಲ್ಲೇ ಸರ್ಕಾರದಿಂದ ದೂರಸಂಪರ್ಕ ಪ್ರಾಧಿಕಾರಕ್ಕೆ ಪತ್ರ ರವಾನೆಯಾಗಿದೆ. ಈ ಪ್ಲಾಟ್‍ಫಾರ್ಮ್‍ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸ್ಥಗಿತಗೊಳಿಸಲು ಸರ್ಕಾರ ನಿರ್ದೇಶಿಸಿದೆ.

Tags:
error: Content is protected !!