Ban on grazing of cattle within forest areas Eshwara Khandre
ಬೆಂಗಳೂರು : ರಾಜ್ಯದಲ್ಲಿರುವ ಎಲ್ಲ ಅರಣ್ಯ ಪ್ರದೇಶದೊಳಗೆ ದನಕರು, ಮೇಕೆ, ಕುರಿ ಮೇಯಿಸುವುದನ್ನು ನಿಷೇಧಿಸಲು ನಿಯಮಾನುಸಾರ ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.
ಈ ಸಂಬಂಧ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮತ್ತು ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸೂಚನೆ ನೀಡಿರುವ ಅವರು, ದೊಡ್ಡ ಸಂಖ್ಯೆಯಲ್ಲಿ ಜಾನುವಾರುಗಳನ್ನು ಅರಣ್ಯ ಪ್ರದೇಶದೊಳಗೆ ಮೇಯಲು ಬಿಡುವುದರಿಂದ ಕಾಡಿನಲ್ಲಿ ಆಗಷ್ಟೇ ಮೊಳಕೆ ಒಡೆದ ಚಿಕ್ಕಪುಟ್ಟ ಸಸಿಗಳು ಸಾಕು ಪ್ರಾಣಿಗಳಿಗೆ ಆಹಾರವಾಗಿ, ಅರಣ್ಯದಲ್ಲಿ ಹೊಸ ಗಿಡಗಳು ಬೆಳೆಯದೆ, ಅರಣ್ಯ ಸಂವರ್ಧನೆಗೆ ಅಡ್ಡಿಯಾಗುತ್ತಿದೆ ಎಂದು ಪರಿಸರಪ್ರೇಮಿಗಳು ಅಭಿಪ್ರಾಯಪಟ್ಟಿರುವುದಾಗಿ ತಿಳಿಸಿದ್ದಾರೆ.
ದೊಡ್ಡ ಸಂಖ್ಯೆಯ ಸಾಕು ಪ್ರಾಣಿಗಳು ಕಾಡಿನಲ್ಲಿ ಮೇಯುವುದರಿಂದ ಕಾಡಿನಲ್ಲಿರುವ ಸಸ್ಯಹಾರಿ ಪ್ರಾಣಿಗಳಿಗೂ ಮೇವಿನ ಕೊರತೆ ಉಂಟಾಗುತ್ತದೆ. ಮಿಗಿಲಾಗಿ ಊರಿನಿಂದ ಕಾಡಿಗೆ ಮೇಯಲು ಹೋಗುವ ಪ್ರಾಣಿಗಳಿಂದ ವನ್ಯಜೀವಿಗಳು ಸಾಂಕ್ರಾಮಿಕ ರೋಗಗಳಿಗೆ ತುತ್ತಾಗುವ ಸಾಧ್ಯತೆಯೂ ಇರುತ್ತದೆ ಎಂಬ ಅಂಶವನ್ನೂ ಉಲ್ಲೇಖಿಸಿದ್ದಾರೆ.
ಅರಣ್ಯ ಸಂವರ್ಧನೆಯಾಗದಿದ್ದರೆ ಅದು ಆ ಅರಣ್ಯದಲ್ಲಿ ಹರಿಯುವ ನದಿಗಳ ಮೇಲೂ ಪರಿಣಾಮ ಬೀರುತ್ತದೆ. ಇದರಿಂದ ವನ್ಯಜೀವಿ-ಮಾನವ ಸಂಘರ್ಷ ಹೆಚ್ಚಳವಾಗುತ್ತದೆ, ಕಾಡಿನೊಳಗೆ ಹೋಗುವ ದನಗಾಹಿಗಳು ವನ್ಯಜೀವಿ ದಾಳಿಯಿಂದ ಮೃತಪಟ್ಟರೆ ಪರಿಹಾರ ನೀಡಲೂ ನಿಯಮದಲ್ಲಿ ಅವಕಾಶ ಇರುವುದಿಲ್ಲ. ಹೀಗಾಗಿ ಕೂಡಲೇ ಅಭಯಾರಣ್ಯಗಳಲ್ಲಿ ಮೇಕೆ, ಕುರಿ, ದನಕರುಗಳನ್ನು ಮೇಯಿಸುವುದನ್ನು ನಿಷೇಧಿಸಬೇಕು ಎಂದು ವನ್ಯಜೀವಿ ಪ್ರೇಮಿಗಳು, ಪರಿಸರವಾದಿಗಳು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಈ ಬಗ್ಗೆ ಪರಿಶೀಲಿಸಿ ಕಾನೂನು ರೀತ್ಯ ಕ್ರಮವಹಿಸಲು ಸೂಚಿಸಿದ್ದಾರೆ.
ಕಾಡಿನಲ್ಲಿರುವ ವನ್ಯಜೀವಿಗಳು ಮೇಯಲು ಹೋದ ದನಕರುಗಳನ್ನು ಕೊಂದಾಗ, ಆಕ್ರೋಶಗೊಂಡು ಕೆಲವರು ಮೃತ ಜಾನುವಾರುಗಳಿಗೆ ವಿಷಹಾಕುವ ಕಾರಣ ವನ್ಯಜೀವಿಗಳು ಸಾವಿಗೀಡಾಗುತ್ತವೆ. ಇದಕ್ಕೆ ಇತ್ತೀಚೆಗೆ ಹೂಗ್ಯಂ ವಲಯದಲ್ಲಿ ಒಂದು ತಾಯಿ ಹುಲಿ ಮತ್ತು ನಾಲ್ಕು ಮರಿ ಹುಲಿಗಳು ಸಾವಿಗೀಡಾಗಿರುವುದೇ ಸಾಕ್ಷಿಯಾಗಿದೆ ಎಂದೂ ಪರಿಸರ ಪ್ರೇಮಿಗಳು ಅಭಿಪ್ರಾಯಪಟ್ಟಿರುತ್ತಾರೆ ಎಂದು ಟಿಪ್ಪಣಿಯಲ್ಲಿ ಉಲ್ಲೇಖಿಸಿದ್ದಾರೆ.
ಮಿಗಿಲಾಗಿ ಮದ್ರಾಸ್ ಹೈಕೋರ್ಟ್ “ತಮಿಳುನಾಡಿನ ಅರಣ್ಯದೊಳಗೆ ಸಾಕು ಪ್ರಾಣಿಗಳನ್ನು ಮೇಯಿಸುವುದರ ವಿರುದ್ಧ ನೀಡಿದ ತೀರ್ಪಿನ ಬಳಿಕ, ನೆರೆಯ ರಾಜ್ಯದಿಂದಲೂ ನಮ್ಮ ರಾಜ್ಯಕ್ಕೆ ದನಕರುಗಳನ್ನು ತಂದು ಕಾಡಿನಲ್ಲಿ ಮೇಯಿಸಲಾಗುತ್ತಿದೆ. ಹೀಗಾಗಿ ಕರ್ನಾಟಕ ರಾಜ್ಯದ ಅರಣ್ಯಗಳ ಸಂರಕ್ಷಣೆ ಮತ್ತು ಸಂವರ್ಧನೆಯ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲ ಅರಣ್ಯ ಪ್ರದೇಶದೊಳಗೆ ಸಾಕು ಪ್ರಾಣಿಗಳನ್ನು ಮೇಯಲು ಬಿಡುವುದನ್ನು ನಿರ್ಬಂಧಿಸಲು ಮತ್ತು ನಿಷೇಧಿಸಲು ನಿಯಮಾನುಸಾರ ಕ್ರಮವಹಿಸಲು ಸೂಚಿಸಿದ್ದಾರೆ.
ಮೈಸೂರು : ಮುಂದಿನ ಬಜೆಟ್ ಮಂಡನೆಗೆ ಫೆ.2 ರಿಂದ ಇಲಾಖಾವಾರು ಅಧಿಕಾರಿಗಳ ಸಭೆ ನಡೆಸಿ ತಯಾರಿ ಶುರು ಮಾಡಲಿದ್ದೇನೆ ಎಂದು…
ಮೈಸೂರು : ಕರ್ನಾಟಕದಲ್ಲಿ ಬಿಜೆಪಿ-ಜಾ.ದಳ ಒಂದಾದರೂ ಅಧಿಕಾರಕ್ಕೆ ಬರಲ್ಲವೆಂದು ಭವಿಷ್ಯ ನುಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, 2028ಕ್ಕೂ ನಾವೇ ಅಧಿಕಾರಕ್ಕೆ ಬರುವುದು…
ಬೆಂಗಳೂರು : ಪ್ರತಿವರ್ಷ ಗಣರಾಜ್ಯೋತ್ಸವ ದಿನದಂದು ಪೊಲೀಸರಿಗೆ ತಾವು ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಕೊಡಮಾಡುವ ರಾಷ್ಟ್ರಪತಿ ಪದಕ ಘೋಷಣೆ ಮಾಡಲಾಗಿದ್ದು,…
ಬೆಳಗಾವಿ : ಕರ್ನಾಟಕ-ಗೋವಾ-ಮಹಾರಾಷ್ಟ್ರ ಗಡಿ ಪ್ರದೇಶದಲ್ಲಿ ದೇಶದ ಇತಿಹಾಸದಲ್ಲೇ ಅತಿದೊಡ್ಡ ದರೋಡೆ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಬೆಳಗಾವಿ ಜಿಲ್ಲೆಯ…
ಹುಣಸೂರು : ಸಾಮಾಜಿಕ ಜಾಲತಾಣದಲ್ಲಿ ಗಮನ ಸೆಳೆಯುವ ಉದ್ದೇಶದಿಂದ ಅಪಾಯಕಾರಿ ಬೈಕ್ ವೀಲಿಂಗ್ ಮಾಡಿದ 17 ವರ್ಷದ ಅಪ್ರಾಪ್ತ ಯುವಕನನ್ನು…
ಹೊಸದಿಲ್ಲಿ : ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ. ಈ ವ್ಯವಸ್ಥೆಯ ಜೀವಾಳವೇ ಮತದಾರ. ಪ್ರತಿ ವರ್ಷ ಜನವರಿ 25…