ಬೆಂಗಳೂರು: ಹೊರ ರಾಜ್ಯದ ಜಾನುವಾರುಗಳನ್ನು ತಂದು ನಮ್ಮ ರಾಜ್ಯದ ಕಾಡಿನಲ್ಲಿ ಮೇಯಿಸುವುದನ್ನು ನಿಷೇಧಿಸಲು ಸೂಚನೆ ನೀಡಲಾಗಿದೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಈ ಬಗ್ಗೆ ವಿಧಾನಸಭೆಯಲ್ಲಿಂದು ಮಾತನಾಡಿದ ಅವರು, ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿಗಳ ಸಾವು ಸಂಭವಿಸಿದಾಗ ತಮಿಳುನಾಡಿನಿಂದ ಸಾವಿರಾರು ಜಾನುವಾರುಗಳನ್ನು ತಂದು ನಮ್ಮ ಅರಣ್ಯ ನಾಶಪಡಿಸುತ್ತಿರುವ ಅಂಶ ನನ್ನ ಗಮನಕ್ಕೆ ಬಂದಿದೆ. ಆದ್ದರಿಂದ ಹೊರ ರಾಜ್ಯದ ಜಾನುವಾರುಗಳನ್ನು ನಮ್ಮ ಕಾಡಿನಲ್ಲಿ ಮೇಯಿಸುವುದಕ್ಕೆ ನಿಷೇಧ ಹೇರಲಾಗಿದೆ ಎಂದರು.
ಮುಂದುವರಿದು ಮಾತನಾಡಿದ ಅವರು, ನಮ್ಮ ರಾಜ್ಯದ ಕುರಿಗಾಹಿಗಳಿಗೆ ಯಾವುದೇ ತೊಂದರೆ ನೀಡದಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸ್ಪಷ್ಟಪಡಿಸಿದರು.





