Mysore
24
scattered clouds

Social Media

ಮಂಗಳವಾರ, 18 ಆಗಸ್ಟ್ 2026
Light
Dark

ಕೆಆರ್‌ಎಸ್‌ನ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆಗೆ ನಿಷೇಧ: ಹೈಕೋರ್ಟ್‌ ಆದೇಶ

ಮಂಡ್ಯ: ಕೆಆರ್‌ಎಸ್‌ ಡ್ಯಾಂ ಸುತ್ತಲೂ ಗಣಿಗಾರಿಕೆ ನಿಷೇಧಿಸುವಂತೆ ಹೈಕೋರ್ಟ್‌ ತೀರ್ಪು ನೀಡಿದ ಬೆನ್ನಲ್ಲೇ ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸದಂತೆ ಹೈಕೋರ್ಟ್‌ ಆದೇಶ ಹೊರಡಿಸಿದೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳು ಹೈಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಡ್ಯಾಂನಿಂದ 20 ಕಿ.ಮೀ ವ್ಯಾಪ್ತಿಯ 30 ಕ್ವಾರೆಗಳನ್ನು 2022ನೇ ಸಾಲಿನಲ್ಲಿ ಸ್ಥಗಿತಗೊಳಿಸಲಾಗಿದೆ. ಉಳಿದಂತೆ ಪರವಾನಗಿ ಹೊಂದಿರುವ ಕ್ವಾರೆ ಹಾಗೂ ಕ್ರಷರ್‌ಗಳಿಗೆ ಪತ್ರ ಬರೆದು ಕಾರ್ಯ ಸ್ಥಗಿತಗೊಳಿಸುವಂತೆ ತಿಳಿಸಬೇಕೆಂದು ತಿಳಿಸಿದ್ದಾರೆ.

ಡ್ಯಾಂನಿಂದ 20 ಕಿ.ಮೀ ವ್ಯಾಪ್ತಿಗೆ ಶ್ರೀರಂಗಪಟ್ಟಣ, ಪಾಂಡವಪುರ ಹಾಗೂ ಕೆ.ಆರ್.ಪೇಟೆ ತಾಲೂಕು ಸೇರಲಿದೆ. ಈ ತಾಲೂಕಿನ ತಹಸೀಲ್ದಾರ್‌ಗಳು ಯಾವುದೇ ಗಣಿಗಾರಿಕೆ ನಡೆಯದಂತೆ ನೋಡಿಕೊಳ್ಳಬೇಕು. ಅನಧಿಕೃತವಾಗಿ ಮೈನಿಂಗ್‌ ನಡೆಯುತ್ತಿರುವ ಬಗ್ಗೆಯೂ ಹೆಚ್ಚಿನ ನಿಗಾ ವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್, ಭೂ ವಿಜ್ಞಾನಿ ರೇಷ್ಮಾ, ಡಿಎಫ್‌ಒ ರಾಜು ಇತರರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!