ಮಂಡ್ಯ: ಕೆಆರ್‌ಎಸ್ ಡ್ಯಾಂ ಸುತ್ತಲೂ ಗಣಿಗಾರಿಕೆ ನಿಷೇಧಿಸುವಂತೆ ಹೈಕೋರ್ಟ್ ತೀರ್ಪು ನೀಡಿದ ಬೆನ್ನಲ್ಲೇ ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ಗಣಿಗಾರಿಕೆ ನಡೆಸದಂತೆ ಹೈಕೋರ್ಟ್ ಆದೇಶ ಹೊರಡಿಸಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಡಾ.ಕುಮಾರ್ ಅವರು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಭೆಯಲ್ಲಿ ಅಧಿಕಾರಿಗಳು ಹೈಕೋರ್ಟ್ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಡ್ಯಾಂನಿಂದ 20 ಕಿ.ಮೀ ವ್ಯಾಪ್ತಿಯ 30 ಕ್ವಾರೆಗಳನ್ನು 2022ನೇ ಸಾಲಿನಲ್ಲಿ ಸ್ಥಗಿತಗೊಳಿಸಲಾಗಿದೆ. ಉಳಿದಂತೆ ಪರವಾನಗಿ ಹೊಂದಿರುವ ಕ್ವಾರೆ ಹಾಗೂ ಕ್ರಷರ್‌ಗಳಿಗೆ ಪತ್ರ ಬರೆದು ಕಾರ್ಯ ಸ್ಥಗಿತಗೊಳಿಸುವಂತೆ ತಿಳಿಸಬೇಕೆಂದು ತಿಳಿಸಿದ್ದಾರೆ.
ಡ್ಯಾಂನಿಂದ 20 ಕಿ.ಮೀ ವ್ಯಾಪ್ತಿಗೆ ಶ್ರೀರಂಗಪಟ್ಟಣ, ಪಾಂಡವಪುರ ಹಾಗೂ ಕೆ.ಆರ್.ಪೇಟೆ ತಾಲೂಕು ಸೇರಲಿದೆ. ಈ ತಾಲೂಕಿನ ತಹಸೀಲ್ದಾರ್‌ಗಳು ಯಾವುದೇ ಗಣಿಗಾರಿಕೆ ನಡೆಯದಂತೆ ನೋಡಿಕೊಳ್ಳಬೇಕು. ಅನಧಿಕೃತವಾಗಿ ಮೈನಿಂಗ್ ನಡೆಯುತ್ತಿರುವ ಬಗ್ಗೆಯೂ ಹೆಚ್ಚಿನ ನಿಗಾ ವಹಿಸಿ ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್, ಜಿಲ್ಲಾ ಪಂಚಾಯಿತಿ ಸಿಇಒ ಶೇಖ್ ತನ್ವೀರ್ ಆಸಿಫ್, ಭೂ ವಿಜ್ಞಾನಿ ರೇಷ್ಮಾ, ಡಿಎಫ್‌ಒ ರಾಜು ಇತರರಿದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…