ಬೆಂಗಳೂರು : ಜೈವಿಕವಾಗಿ ವಿಘಟನೆಯಾಗುವ ಕೈಚೀಲ (ಕ್ಯಾರಿ ಬ್ಯಾಗ್)ಗಳ ತಯಾರಿಕೆ, ದಾಸ್ತಾನು, ಮಾರಾಟಕ್ಕೆ ಅವಕಾಶ ಆಗುವಂತೆ 2016ರ ಅಧಿಸೂಚನೆಯಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್ ವ್ಯಾಖ್ಯಾನಕ್ಕೆ ತಿದ್ದುಪಡಿ ತರಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.
ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಅವರು, 2016ರ ಸರ್ಕಾರದ ಅಧಿಸೂಚನೆಯಲ್ಲಿ ಪ್ಲಾಸ್ಟಿಕ್ ಕ್ಯಾರಿಬ್ಯಾಗ್, ಭಿತ್ತಿಪತ್ರ, ತೋರಣ, ಫ್ಲೆಕ್ಸ್, ಪ್ಲಾಸ್ಟಿಕ್ ತಟ್ಟೆ, ಲೋಟ, ಚಮಚ, ಪ್ಲಾಸ್ಟಿಕ್ ಹಾಳೆಗಳ ತಯಾರಿಕೆ, ಮಾರಾಟ, ದಾಸ್ತಾನು ನಿಷೇಧಿಸಲಾಗಿತ್ತು. ಆದರೆ ಇತ್ತೀಚೆಗೆ ಸಸ್ಯಜನ್ಯ ಕೈಚೀಲಗಳ ಆವಿಷ್ಕಾರವಾಗಿದ್ದು, ಇದು 180 ದಿನಗಳಲ್ಲಿ ಜೈವಿತವಾಗಿ ವಿಘಟನೆಯಾಗುತ್ತದೆ, ಹೀಗಾಗಿ ಇದರ ಮಾರಾಟಕ್ಕೆ ಅನುಕೂಲವಾಗುವಂತೆ ತಿದ್ದುಪಡಿ ತರಲಾಗಿದ್ದು, ಸಚಿವ ಸಂಪುಟ ಸಮ್ಮತಿ ನೀಡಿದೆ ಎಂದರು.
ಈ ಹಿಂದೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಲ್ಲಿ ನಡೆದ ಸಭೆಯಲ್ಲಿ ತಾವು 2016ರ ಅಧಿಸೂಚನೆಗೆ ತಿದ್ದುಪಡಿ ತಂದು, ಕೇಂದ್ರ ಪರಿಸರ ಇಲಾಖೆಯ 2021ರ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ (ತಿದ್ದುಪಡಿ) ನಿಯಮಗಳನ್ನು ಅಳವಡಿಸಿಕೊಳ್ಳುವ ಬಗ್ಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದ್ದಾಗಿ ಸ್ಮರಿಸಿದರು.
ಪರಿಸರಕ್ಕೆ ಹಾನಿಕಾರಕವಲ್ಲದ ಮತ್ತು ಜೈವಿಕವಾಗಿ ವಿಘಟನೆಯಾಗುವ (ಬಯೋ ಡೀಗ್ರೇಡಬಲ್ -ಕಂಪೋಸ್ಟಬಲ್) ಕೈಚೀಲಗಳನ್ನು ಮತ್ತು ಮೊದಲೇ ಪ್ಯಾಕ್ ಮಾಡಿ ಸೀಲ್ ಮಾಡಿದ ಪ್ಯಾಕೇಜಿಂಗ್ ಪ್ಲಾಸ್ಟಿಕ್ ಗೆ ಸಂಬಂಧಿಸಿದಂತೆ ತಿದ್ದುಪಡಿ ಮಾಡಲಾಗಿದೆ. ಇದು ಕೇಂದ್ರ ಸರ್ಕಾರದ 21ರ ಆದೇಶಕ್ಕೆ ಅನುಗುಣವಾಗಿದೆ ಎಂದು ತಿಳಿಸಿದರು.
ಹೊಸದಿಲ್ಲಿ : ಮಧ್ಯಪ್ರಾಚ್ಯದ ಸಂಘರ್ಷದಿಂದ ಉಂಟಾಗಿರುವ ಎಲ್‌ಪಿಜಿ ಸಿಲಿಂಡರ್ ಕೊರತೆ ಬಗ್ಗೆ ಸಾರ್ವಜನಿಕರಲ್ಲಿ ಉದಿಸಿದ ಆತಂಕದ ನಡುವೆ, ಕೇಂದ್ರ ಸರ್ಕಾರವು…
ಬೆಂಗಳೂರು : ಬಹುನಿರೀಕ್ಷಿತ 2026ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟಿ-20 ಕ್ರಿಕೆಟ್ ಟೂರ್ನಿಯ ಮೊದಲ ಹಂತದ ವೇಳಾಪಟ್ಟಿಯನ್ನು…
ಮೈಸೂರು : ಸಂಶೋಧನೆ ಮಾಡುವಾಗ ವಿದ್ಯಾರ್ಥಿಗಳು ತಮ್ಮ ಸಂಪೂರ್ಣ ಪರಿಶ್ರಮದಿಂದ ಸಂಶೋಧನೆಗಳನ್ನು ಸಿದ್ಧಪಡಿಸಬೇಕು, AI ತಂತ್ರಜ್ಞಾನದ ಕಡೆ ಮೊರೆಹೋಗುವುದನ್ನು ಕಡಿಮೆ…
ಸಾಲಿಗ್ರಾಮ : ತನ್ನ ಜಮೀನಿಗೆ ಸಂಬಂಧಿಸಿದ ಖಾತೆಯನ್ನು ಮಾಡಿಕೊಡದೆ ಸಾಲಿಗ್ರಾಮ ನಾಡಕಚೇರಿ ಅವರು ಸತಾಯಿಸುತ್ತಿದ್ದಾರೆ ಎಂದು ಮನನೊಂದು ಸಾಲಿಗ್ರಾಮದ ನಾಡ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದ ಸಂಘರ್ಷ ಪೀಡಿತ ಸಮುದ್ರ ವಲಯದಲ್ಲಿ ವ್ಯಾಪಾರಿ ಹಡಗುಗಳ ಮೇಲೆ ನಡೆದ ದಾಳಿಯಲ್ಲಿ ಇಬ್ಬರು ಭಾರತೀಯರು…
ಗುಂಡ್ಲುಪೇಟೆ : ಪಟ್ಟಣದ ಹೊರವಲಯದ ವಿಜಯಪುರ ಅಮಾನಿ ಕೆರೆಯ ಬಳಿ ವ್ಯಕ್ತಿಯೊಬ್ಬ ಬರ್ಬರವಾಗಿ ಕೊಲೆಯಾಗಿರುವ ಘಟನೆ ನಡೆದಿದೆ. ತಾಲ್ಲೂಕಿನ ಮೂಖಹಳ್ಳಿ…