ಬೆಂಗಳೂರು: ಯಾವುದೇ ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಸಂಘಟನೆಯು ಶಾಖೆ, ಸಾಂಘಿಕ್ ಅಥವಾ ಬೈಠಕ್ ಹೆಸರಲ್ಲಿ ನಡೆಸುವ ಎಲ್ಲಾ ಬಗೆಯ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಸಚಿವ ಪ್ರಿಯಾಂಕ ಖರ್ಗೆ ಅವರು ಸಿಎಂ ಸಿದ್ದರಾಮಯ್ಯಗೆ ಒತ್ತಾಯಿಸಿದ್ದಾರೆ.
ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿರುವ ಸಚಿವ ಪ್ರಿಯಾಂಕ ಖರ್ಗೆ ಅವರು, ನಾಡಿನ ಮಕ್ಕಳು, ಯುವ ಸಮುದಾಯ, ಸಾರ್ವಜನಿಕರು ಮತ್ತು ಸಮಾಜದ ಸ್ವಾಸ್ಥ್ಯದ ಹಿತದೃಷ್ಟಿಯಿಂದ ಸರ್ಕಾರಿ ಶಾಲೆಗಳು ಹಾಗೂ ಸರ್ಕಾರದ ಅನುದಾನಿತ ಶಾಲೆಗಳು ಮತ್ತು ಮೈದಾನಗಳು, ಉದ್ಯಾನವನಗಳು, ಮುಜರಾಯಿ ಇಲಾಖೆಯ ದೇವಸ್ಥಾನಗಳು, ಪುರಾತತ್ವ ಇಲಾಖೆಯ ಸ್ಥಳಗಳು ಸೇರಿದಂತೆ ಮತ್ತಿತರ ಕಡೆ ಆರ್‌ಎಸ್‌ಎಸ್ ನಡೆಸುವ ಚಟುವಟಿಕೆಗಳಿಗೆ ನಿಷೇಧ ಹೇರಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಇದನ್ನು ಓದಿ : ಆರ್‌ಎಸ್‌ಎಸ್‌ಗೆ 100 ವರ್ಷ ತುಂಬಿದ ಬೆನ್ನಲ್ಲೇ ಬಿಗ್ ಶಾಕ್: ಏನದು ಗೊತ್ತಾ?
ಜನ ಸಮುದಾಯದಲ್ಲಿ ದ್ವೇಷ ಬಿತ್ತುವ ವಿಭಜಕ ಶಕ್ತಿಗಳು ತಲೆ ಎತ್ತಿದಾಗ ಅವುಗಳನ್ನು ನಿಗ್ರಹಿಸುವುಕ್ಕಾಗಿ ಹಾಗೂ ದೇಶದ ಜಾತ್ಯತೀತ ಮೌಲ್ಯಗಳನ್ನು ಎತ್ತಿ ಹಿಡಿಯುವುದಕ್ಕಾಗಿ ಸಮಗ್ರತೆ, ಸಮಾನತೆ ಮತ್ತು ಏಕತೆಯ ಮೂಲಭೂತ ತತ್ವಗಳನ್ನೊಳಗೊಂಡ ಸಂವಿಧಾನವು ನಮಗೆ ಅಧಿಕಾರವನ್ನು ನೀಡಿದೆ ಎಂದು ಹೇಳಿದ್ದಾರೆ.
ಆರ್‌ಎಸ್‌ಎಸ್ ಪೊಲೀಸ್ ಮೂಲಕ ಅನುಮತಿ ಪಡೆಯದ ದೊಣ್ಣೆಗಳನ್ನು ಹಿಡಿದು ಆಕ್ರಮಣಕಾರಿ ಪ್ರದರ್ಶನ ಮುಗ್ಧ ಮಕ್ಕಳು ಹಾಗೂ ಯುವಜನರ ಮನಸ್ಸಿನ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…