r ashok
ಬೆಂಗಳೂರು: ಆರ್‌ಎಸ್‌ಎಸ್‌ಗೆ ಕಡಿವಾಣ ಹಾಕುವ ವ್ಯರ್ಥ ಪ್ರಯತ್ನ ಬಿಟ್ಟು, ತಾಕತ್ತಿದ್ದರೆ ಇದನ್ನು ನಿಷೇಧ ಮಾಡಿ ನೋಡೋಣ ಎಂದು ರಾಜ್ಯ ಸರ್ಕಾರಕ್ಕೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ ಬಹಿರಂಗ ಸವಾಲು ಹಾಕಿದ್ದಾರೆ.
ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಹಿಟ್ಲರ್ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಛಡಿಯೇಟು ಕೊಟ್ಟಿದ್ದು, ಈ ರೀತಿ ಹಿಂಬಾಗಿಲಿನಿಂದ ಆರ್‌ಎಸ್‌ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹಾಕಲು ಆಗುವುದಿಲ್ಲ. ಅಲ್ಲದೆ, ಈ ಹಿಟ್ಲರ್ ಆಟ ಜಾಸ್ತಿ ದಿನ ನಡೆಯುವುದಿಲ್ಲ ಸ್ವಾಮಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.
ಆರ್‌ಎಸ್‌ಎಸ್ ಪಥಸಂಚನಲಕ್ಕೆ ಅವಕಾಶ ನೀಡದಿರುವ ಕಾಂಗ್ರೆಸ್ ಸರ್ಕಾರದ ನಿರಂಕುಶವಾದಿ ನಡೆಗೆ ಮಾನ್ಯ ಹೈಕೋರ್ಟ್ ಛೀಮಾರಿ ಹಾಕಿದ್ದು, ಸಂವಿಧಾನದತ್ತ ಮೂಲಭೂತ ಹಕ್ಕುಗಳ ಉಲ್ಲಂಘನೆ ಆಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ ಖರ್ಗೆ ಅವರೇ, ನಿಮ್ಮ ಪರಮೋಚ್ಛ ನಾಯಕ ರಾಹುಲ್ ಗಾಂಧಿ ಅವರು ಸದಾ ಜೇಬಿನಲ್ಲಿಟ್ಟುಕೊಂಡು ಓಡಾಡುವ ಸಂವಿಧಾನ ಪುಸ್ತಕದಲ್ಲಿ ನಾಗರೀಕರ ಮೂಲಭೂತ ಹಕ್ಕುಗಳಿಗೆ ಸ್ಥಾನ ಇಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.
ಇದನ್ನೂ ಓದಿ:-ತಾಕತ್ತಿದ್ದರೆ ಆರ್‌ಎಸ್‌ಎಸ್ ನಿಷೇಧ ಮಾಡಿ: ಆರ್.ಅಶೋಕ್ ಬಹಿರಂಗ ಸವಾಲು
ಮತ್ತೊಂದು ಪೋಸ್ಟ್‌ನಲ್ಲಿ ಒಂದೇ ಒಂದು ರಸ್ತೆ ಗುಂಡಿ ಮುಚ್ಚಲು ದುಡ್ಡಿಲ್ಲ. ಪಾಲಿಕೆ ಶಾಲೆಗಳ ಶಿಕ್ಷಕರಿಗೆ 6 ತಿಂಗಳಿಂದ ವೇತನ ಕೊಟ್ಟಿಲ್ಲ. 8 ತಿಂಗಳಿಂದ ಸ್ಮಶಾನ ಸಿಬ್ಬಂದಿಗೆ ಸಂಬಳವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಬೆಂಗಳೂರಿನ ಜನ ಪಾಲಿಕೆಗೆ ಕಟ್ಟುತ್ತಿರುವ ಸಾವಿರಾರು ಕೋಟಿ ತೆರಿಗೆ ಹಣ ಎಲ್ಲಿ ಸ್ವಾಮಿ? ಜನರ ತೆರಿಗೆ ಹಣ ಯಾರ ಜೇಬು ಸೇರುತ್ತಿದೆ? ಇದರ ಮೇಲೆ ಈಗ ಎ-ಖಾತಾ ಪರಿವರ್ತನೆ ನೆಪದಲ್ಲಿ ಮತ್ತೊಮ್ಮೆ ಜನ ಸಾಮಾನ್ಯರಿಂದ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಲು ಇಳಿದಿದ್ದೀರಿ. ಬ್ರ್ಯಾಂಡ್ ಬೆಂಗಳೂರು ಮಾಡ್ತೀನಿ ಎಂದು ಬೆಂಗಳೂರನ್ನು ಬರ್ಬಾದ್ ಮಾಡಿಬಿಟ್ಟರಲ್ಲ ಸ್ವಾಮಿ. ಜನ ನಿಮ್ಮನ್ನು ಖಂಡಿತ ಕ್ಷಮಿಸುವುದಿಲ್ಲ ಎಂದು ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.
ಅಮೆರಿಕ-ಇಸ್ರೇಲ್ ಹಾಗೂ ಇರಾನ್ ನಡುವಿನ ಯುದ್ಧಕ್ಕಿಂತಲ್ಲೂ ಹೆಚ್ಚು ಸದ್ದು ಮಾಡುತ್ತಿರುವುದು ಭಾರತದಲ್ಲಿನ ಎಲ್‌ಪಿಜಿ ಪೂರೈಕೆ ವಿಚಾರ. ಯುದ್ಧೋನ್ಮಾದ ವೈರತ್ವ ಹೊಂದಿರುವ…
ಶುಭಾ ಖಟಾವಕರ ಮ್ಹೆತ್ರಸ್ ಬಲಾಢ್ಯ ರಾಷ್ಟ್ರಗಳಾದ ಅಮೆರಿಕ -ಇಸ್ರೇಲ್, ಇರಾನ್ ಮೇಲೆ ದಾಳಿ ಶುರು ಮಾಡಿ ೧೩-೧೪ ದಿನಗಳೇ ಕಳೆದು…
ರಾಜ್ಯ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ಅಧಿಕಾರ ಹಂಚಿಕೆಯ ಕಚ್ಚಾಟ ನಿರ್ಣಾಯಕ ಘಟ್ಟಕ್ಕೆ ತಲುಪಿದಂತೆ ಕಾಣುತ್ತಿದೆ. ಕಾರಣ ಅಧಿಕಾರ ಹಂಚಿಕೆಯ ಮಾತು ಉಳಿದುಕೊಂಡಿದೆ…
ನವೀನ್ ಡಿಸೋಜ ದೀರ್ಘಕಾಲದ ಬೇಡಿಕೆಗೆ ಸರ್ಕಾರದ ಸ್ಪಂದನೆ; ಕೊಡವರ ಶ್ರೇಯೋಭಿವೃದ್ಧಿಗೆ ಅನುಕೂಲ ಮಡಿಕೇರಿ:ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ…
ಹೇಮಂತ್ ಕುಮಾರ್ ಮಂಡ್ಯ: ಪುರಸಭೆಯಾಗಿದ್ದ ಮದ್ದೂರು ಟೌನ್ ಆಡಳಿತ ನಗರಸಭೆಯಾಗಿ ಪರಿವರ್ತನೆ ಗೊಂಡಿದೆ. ಈ ನಗರಸಭೆಗೆ ಅಕ್ಕಪಕ್ಕದ ಗೆಜ್ಜಲಗೆರೆ ಗ್ರಾಮ…
ಗಿರೀಶ್ ಹುಣಸೂರು ಸಿಲಿಂಡರ್ ರೀಫಿಲ್ಲಿಂಗ್‌ಗೆ ೨೫ ದಿನಗಳ ಅವಧಿ ನಿಗದಿ; ವಸತಿ ಶಾಲೆಗಳು, ಹಾಸ್ಟೆಲ್‌ಗಳಿಗೆ ಬಿಸಿ ತಟ್ಟುವ ಸಂಭವ ಮೈಸೂರು: ಮಧ್ಯಪ್ರಾಚ್ಯದಲ್ಲಿ…