ರಾಜ್ಯ

ತಾಕತ್ತಿದ್ದರೆ ಆರ್‌ಎಸ್‌ಎಸ್‌ ನಿಷೇಧ ಮಾಡಿ: ಆರ್‌.ಅಶೋಕ್‌ ಬಹಿರಂಗ ಸವಾಲು

ಬೆಂಗಳೂರು: ಆರ್‌ಎಸ್‌ಎಸ್‌ಗೆ ಕಡಿವಾಣ ಹಾಕುವ ವ್ಯರ್ಥ ಪ್ರಯತ್ನ ಬಿಟ್ಟು, ತಾಕತ್ತಿದ್ದರೆ ಇದನ್ನು ನಿಷೇಧ ಮಾಡಿ ನೋಡೋಣ ಎಂದು ರಾಜ್ಯ ಸರ್ಕಾರಕ್ಕೆ ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಆಶೋಕ್ ಬಹಿರಂಗ ಸವಾಲು ಹಾಕಿದ್ದಾರೆ.

ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ರಾಜ್ಯ ಸರ್ಕಾರದ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಹಿಟ್ಲರ್ ಕಾಂಗ್ರೆಸ್ ಸರ್ಕಾರಕ್ಕೆ ಹೈಕೋರ್ಟ್ ಛಡಿಯೇಟು ಕೊಟ್ಟಿದ್ದು, ಈ ರೀತಿ ಹಿಂಬಾಗಿಲಿನಿಂದ ಆರ್‌ಎಸ್‌ಎಸ್‌ ಚಟುವಟಿಕೆಗಳಿಗೆ ನಿರ್ಬಂಧ ಹಾಕಲು ಆಗುವುದಿಲ್ಲ. ಅಲ್ಲದೆ, ಈ ಹಿಟ್ಲರ್ ಆಟ ಜಾಸ್ತಿ ದಿನ ನಡೆಯುವುದಿಲ್ಲ ಸ್ವಾಮಿ ಎಂದು ಎಚ್ಚರಿಕೆ ಕೊಟ್ಟಿದ್ದಾರೆ.

ಆರ್‌ಎಸ್‌ಎಸ್‌ ಪಥಸಂಚನಲಕ್ಕೆ ಅವಕಾಶ ನೀಡದಿರುವ ಕಾಂಗ್ರೆಸ್ ಸರ್ಕಾರದ ನಿರಂಕುಶವಾದಿ ನಡೆಗೆ ಮಾನ್ಯ ಹೈಕೋರ್ಟ್ ಛೀಮಾರಿ ಹಾಕಿದ್ದು, ಸಂವಿಧಾನದತ್ತ ಮೂಲಭೂತ ಹಕ್ಕುಗಳ ಉಲ್ಲಂಘನೆ ಆಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ ಖರ್ಗೆ ಅವರೇ, ನಿಮ್ಮ ಪರಮೋಚ್ಛ ನಾಯಕ ರಾಹುಲ್ ಗಾಂಧಿ ಅವರು ಸದಾ ಜೇಬಿನಲ್ಲಿಟ್ಟುಕೊಂಡು ಓಡಾಡುವ ಸಂವಿಧಾನ ಪುಸ್ತಕದಲ್ಲಿ ನಾಗರೀಕರ ಮೂಲಭೂತ ಹಕ್ಕುಗಳಿಗೆ ಸ್ಥಾನ ಇಲ್ಲವೇ? ಎಂದು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ:-ತಾಕತ್ತಿದ್ದರೆ ಆರ್‌ಎಸ್‌ಎಸ್‌ ನಿಷೇಧ ಮಾಡಿ: ಆರ್‌.ಅಶೋಕ್‌ ಬಹಿರಂಗ ಸವಾಲು

ಮತ್ತೊಂದು ಪೋಸ್ಟ್‌ನಲ್ಲಿ ಒಂದೇ ಒಂದು ರಸ್ತೆ ಗುಂಡಿ ಮುಚ್ಚಲು ದುಡ್ಡಿಲ್ಲ. ಪಾಲಿಕೆ ಶಾಲೆಗಳ ಶಿಕ್ಷಕರಿಗೆ 6 ತಿಂಗಳಿಂದ ವೇತನ ಕೊಟ್ಟಿಲ್ಲ. 8 ತಿಂಗಳಿಂದ ಸ್ಮಶಾನ ಸಿಬ್ಬಂದಿಗೆ ಸಂಬಳವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ, ಬೆಂಗಳೂರಿನ ಜನ ಪಾಲಿಕೆಗೆ ಕಟ್ಟುತ್ತಿರುವ ಸಾವಿರಾರು ಕೋಟಿ ತೆರಿಗೆ ಹಣ ಎಲ್ಲಿ ಸ್ವಾಮಿ? ಜನರ ತೆರಿಗೆ ಹಣ ಯಾರ ಜೇಬು ಸೇರುತ್ತಿದೆ? ಇದರ ಮೇಲೆ ಈಗ ಎ-ಖಾತಾ ಪರಿವರ್ತನೆ ನೆಪದಲ್ಲಿ ಮತ್ತೊಮ್ಮೆ ಜನ ಸಾಮಾನ್ಯರಿಂದ ಲಕ್ಷಾಂತರ ರೂಪಾಯಿ ಸುಲಿಗೆ ಮಾಡಲು ಇಳಿದಿದ್ದೀರಿ. ಬ್ರ್ಯಾಂಡ್ ಬೆಂಗಳೂರು ಮಾಡ್ತೀನಿ ಎಂದು ಬೆಂಗಳೂರನ್ನು ಬರ್ಬಾದ್ ಮಾಡಿಬಿಟ್ಟರಲ್ಲ ಸ್ವಾಮಿ. ಜನ ನಿಮ್ಮನ್ನು ಖಂಡಿತ ಕ್ಷಮಿಸುವುದಿಲ್ಲ ಎಂದು ಸರ್ಕಾರದ ವಿರುದ್ದ ಕಿಡಿಕಾರಿದ್ದಾರೆ.

ಆಂದೋಲನ ಡೆಸ್ಕ್

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

12 mins ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

58 mins ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

2 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

8 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

14 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

15 hours ago