ಭಟ್ಕಳ : ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರ ಕಡಲ ತೀರದಲ್ಲಿ ಕೋಲಾರ ಮೂಲದ ನಾಲ್ವರು ವಿದ್ಯಾರ್ಥಿನಿಯರ ದುರಂತ ಸಾವಿನ ನಂತರ 21 ದಿನಗಳ ಕಾಲ ಪ್ರವಾಸಿಗರಿಗೆ ಕಡಲ ತೀರ ಪ್ರವೇಶಕ್ಕೆ ನಿರ್ಬಂಧ ವಿಧಿಸಿತ್ತು. ಆದರೆ ಇದೀಗ ಆ ನಿರ್ಬಂಧವನ್ನು ತೆರವುಗೊಳಿಸಲಾಗಿದೆ ಎಂದು ಜಿಲ್ಲಾಡಳಿತದಿಂದ ಆದೇಶ ಹೊರಡಿಸಲಾಗಿದೆ.
ಈಜು ವಲಯಕ್ಕೆ ಪ್ರತ್ಯೇಕ ಸ್ಥಳ ನಿಗಧಿ
ಮುರುಡೇಶ್ವರ ಪ್ರವಾಸಕ್ಕೆ ಬರುವ ಪ್ರವಾಸಿಗರಿಗೆ ಕಡಲ ತೀರದಿಂದ 250 ಮೀಟರ್ ಈಜಲು ಪ್ರತ್ಯೇಕ ಸ್ಥಳವನ್ನು ನಿಗಧಿ ಮಾಡಲಾಗಿದೆ. ಅಲ್ಲದೇ ಪ್ರವಾಸಿಗರ ಸುರಕ್ಷತೆಗಾಗಿ ಜೀವರಕ್ಷಕ ಸಿಬ್ಬಂದಿಯನ್ನು ನೇಮಿಸಲಾಗಿದ್ದು, ಹಿಂದೆ ಇದ್ದಂತಹ ಸಿಬ್ಬಂದಿಗಳನ್ನು 12 ಸಂಖ್ಯೆಗೆ ಏರಿಸಲಾಗಿದೆ. ಅದರ ಜೊತೆಗೆ ಸ್ಪೀಡ್ ಬೋಟ್, ಜೆಟ್ ಸ್ಕೈ, ಆಮ್ಲಜನಕ ಕಿಟ್, ಮತ್ತು ಲೈಫ್ ಜಾಕೆಟ್ ಸಾಧನಗಳನ್ನು ನೀಡಲಾಗಿದೆ ಎಂದು ಅಧಿಕಾರಿ ಮೂಲಗಳು ತಿಳಿಸಿವೆ.
ಇನ್ನೂ ಕಡಲ ತೀರದ ಅಲ್ಲಲ್ಲಿ ಆಳ ಸಮುದ್ರಕ್ಕಿಳಿಯದಂತೆ ಸೂಚನಾ ಫಲಕಗಳನ್ನು ಅಳವಡಿಸಿ ಪ್ರವಾಸಿಗರಿಗೆ ಎಚ್ಚರಿಸುವ ಸೂಚನಾ ಫಲಕಗಳನ್ನು ಅಳವಡಿಸಲಾಗಿದೆ. ಅಲ್ಲದೇ ಜೀವ ರಕ್ಷಕ ಸಿಬ್ಬಂದಿ ಜೊತೆಗೆ ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.





