ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಜನವರಿ.5ರಂದು ಚಿತ್ರಸಂತೆ ಆಯೋಜನೆ ಮಾಡಲಾಗಿದ್ದು, ಸಿಎಂ ಸಿದ್ದರಾಮಯ್ಯ ಉದ್ಘಾಟನೆ ನೆರವೇರಿಸಲಿದ್ದಾರೆ.
ಈ ಬಾರಿ ಹೆಣ್ಣು ಮಗುವಿಗೆ ಚಿತ್ರಸಂತೆ ಸಮರ್ಪಣೆ ಮಾಡುತ್ತಿರುವುದು ಅತ್ಯಂತ ವಿಶೇಷವೆನಿಸಿದೆ.
ಕರ್ನಾಟಕ ಚಿತ್ರಕಲಾ ಪರಿಷತ್‌ನಿಂದ ಬೆಂಗಳೂರಿನ ಕುಮಾರಕೃಪಾ ರಸ್ತೆಯಲ್ಲಿ ಜನವರಿ.5ರಂದು 22ನೇ ಚಿತ್ರಸಂತೆ ಆಯೋಜನೆ ಮಾಡಲಾಗಿದ್ದು, ಇದಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ.
ಅಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 9ರವರೆಗೆ ಚಿತ್ರಸಂತೆ ನಡೆಯಲಿದ್ದು, 20 ರಾಜ್ಯಗಳ ಕಲಾವಿದರ ಕಲಾಕೃತಿಗಳು ಅನಾವರಣಗೊಳ್ಳಲಿವೆ.
ಅಂದು ನಡೆಯುವ ಚಿತ್ರಸಂತೆಯಲ್ಲಿ ಭಾಗವಹಿಸಲು 3177 ಕಲಾವಿದರು ಈಗಾಗಲೇ ಅರ್ಜಿ ಸಲ್ಲಿಸಿದ್ದು, ಮತ್ತಷ್ಟು ಜನ ಕಲಾವಿದರು ಅರ್ಜಿ ಸಲ್ಲಿಸುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.
ಇನ್ನು ಈ ಬಾರಿ ಹೆಣ್ಣು ಮಗುವಿಗೆ ಚಿತ್ರ ಸಂತೆ ಸಮರ್ಪಣೆ ಮಾಡುತ್ತಿರುವುದು ಅತ್ಯಂತ ವಿಶೇಷವೆನಿಸಿದೆ.
ಬೆಂಗಳೂರಿನಲ್ಲಿ ಈಗಾಗಲೇ ಚಿತ್ರಸಂತೆ ಸಾಕಷ್ಟು ಜನಪ್ರಿಯತೆ ಗಳಿಸಿದ್ದು, ಕಲಾವಿದರು ಚಿತ್ರಸಂತೆಗಾಗಿ ಕಾತುರದಿಂದ ಕಾಯುತ್ತಿದ್ದಾರೆ.
ಇನ್ನು ಪ್ರತಿವರ್ಷವೂ ಕುಮಾರಕೃಪಾ ರಸ್ತೆಯಲ್ಲಿ ಚಿತ್ರಸಂತೆ ನಡೆಯುವುದರಿಂದ ಜನವರಿ.5ರಂದು ಆ ರಸ್ತೆಗೆ ಮೀಸಲಾಗಿರುತ್ತದೆ. ಸಂಚಾರಿ ಪೊಲೀಸರು ಆ ರಸ್ತೆಯ ಬದಲಾಗಿ ಪರ್ಯಾಯ ಮಾರ್ಗಗಳ ಬಗ್ಗೆ ಸೂಚನೆ ನೀಡಲಿದ್ದಾರೆ.
ಕೊನೆಗೂ ಘೋಷಣೆಯಾಗಿದೆ ತಾತ್ಕಾಲಿಕ ಕದನ ವಿರಾಮ ತೆರೆಬಿದ್ದಿದೆ ಕೊಲ್ಲಿ ಯುದ್ಧಕೆ ನಿಟ್ಟುಸಿರು ಬಿಟ್ಟಿದೆ ಜನಜಗ! ಸಿಟ್ಟು ಸೆಡವು ಬದಿಗಿರಿಸಿ ನಡೆಯಲಿ…
ಕೊಲ್ಲಿ ಯುದ್ಧದ ನೆಪದಲ್ಲಿ ಬಂಡವಾಳಶಾಹಿಗಳು ಕೆಜಿಗೆ ರೂ. ೮೯ ಇದ್ದ ಆಟೋ ಗ್ಯಾಸ್ ಗ್ಯಾಸ್ ಅನ್ನು ರೂ. ೧೭೦ಕ್ಕೆ ಮಾರುತ್ತಾ…
ಇರಾನ್ ಮೇಲೆ ಇಸ್ರೇಲ್-ಅಮೆರಿಕ ಕಳೆದ ೪೦ ದಿನಗಳಿಂದ ನಡೆಸುತ್ತಿದ್ದ ಯುದ್ಧಕ್ಕೆ ಅಲ್ಪ ವಿರಾಮವನ್ನು ಘೋಷಿಸಲಾಗಿದೆ. ಈ ಯುದ್ಧದಿಂದಾಗಿ ಜಾಗತಿಕ ಆರ್ಥಿಕತೆಯ…
ಮೈಸೂರು ಜಿಲ್ಲೆಯ ಸರಗೂರನ್ನು ತಾಲ್ಲೂಕು ಕೇಂದ್ರವನ್ನಾಗಿ ಘೋಷಿಸಲಾಗಿದ್ದರೂ ಸರಗೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ೧೦೮ ಆಂಬ್ಯುಲೆನ್ಸ್ ಸೌಲಭ್ಯವಿಲ್ಲದೇ ತುರ್ತು ಸಂದರ್ಭದಲ್ಲಿ…
ಹಾಲಿವುಡ್‌ನ ಪ್ರಖ್ಯಾತ ನಿರ್ದೇಶಕ ಚಾಡ್ ಸ್ಟಹೆಲ್ಸ್ಕಿ ನಿರ್ದೇಶನದ john wick" ಸರಣಿ ಚಿತ್ರಗಳಲ್ಲಿನ ಅಂತ್ಯವಿಲ್ಲದ ಶವಗಳ ಎಣಿಕೆ, ಕ್ವೆಂಟಿನ್ ಟರೆಂಟಿನೋ…
ಪ್ರೇಮ್ ನಿರ್ದೇಶನದ ‘ಕೆಡಿ’ ಚಿತ್ರದ ಹಾಡೊಂದು ದೇಶಾದ್ಯಂತ ಸುದ್ದಿ ಮಾಡಿತಷ್ಟೇ. ಅದರ ಪ್ರಸ್ತಾಪ ಲೋಕಸಭೆಯಲ್ಲೂ ಆಯಿತು. ವಾರ್ತಾ ಮತ್ತು ಪ್ರಸಾರ…