ಸಚಿವರನ್ನು ಭೇಟಿಯಾದ ಎಎಐ ತಂಡ
ಬೆಂಗಳೂರು: ನಗರದಲ್ಲಿ ಉದ್ದೇಶಿತ ಎರಡನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಾಜ್ಯ ಸರಕಾರವು ಗುರುತಿಸಿರುವ ಮೂರು ಸ್ಥಳಗಳ ಪೈಕಿ ಕನಕಪುರ ರಸ್ತೆಯಲ್ಲಿರುವ ಎರಡು ತಾಣಗಳ ಪರಿಶೀಲನೆಯನ್ನು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಉನ್ನತ ಮಟ್ಟದ ತಂಡವು ಮಂಗಳವಾರ ನಡೆಸಿತು.
ನಂತರ ತಂಡದ ಸದಸ್ಯರು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಅವರನ್ನು ಭೇಟಿಯಾಗಿ ವಿಚಾರ ವಿನಿಮಯ ನಡೆಸಿದರು.
ಈ ಸಂದರ್ಭದಲ್ಲಿ ಸಚಿವರು ಕೂಡ ಉದ್ದೇಶಿತ ವಿಮಾನ ನಿಲ್ದಾಣದ ಅಗತ್ಯ, ಬೆಂಗಳೂರಿನ ನಾಗರಿಕ ಮತ್ತು ಕೈಗಾರಿಕಾ ಅಗತ್ಯ ಇತ್ಯಾದಿಗಳನ್ನು ತಂಡದ ಸದಸ್ಯರಿಗೆ ವಿವರಿಸಿ, ಪ್ರಾತ್ಯಕ್ಷಿಕೆ ಪ್ರದರ್ಶಿಸಿದರು. ಅತ್ಯಂತ ಪಾರದರ್ಶಕವಾಗಿ ಸ್ಥಳ ಗುರುತಿಸುವ ಕೆಲಸ ಆಗಲಿ ಎಂದು ತಂಡಕ್ಕೆ ಸಲಹೆ ನೀಡಿದರು.
ಇಂದು ಸಹ ಈ ತಂಡ ನೆಲಮಂಗಲ- ಕುಣಿಗಲ್ ರಸ್ತೆಯ ಸ್ಥಳ ಪರಿಶೀಲನೆ ನಡೆಸಲಿದೆ.
ಉದ್ದೇಶಿತ ಎರಡನೆಯ ವಿಮಾನ ನಿಲ್ದಾಣವನ್ನು ಬೆಂಗಳೂರಿನ ಅಗತ್ಯಗಳನ್ನು ಗಮನದಲ್ಲಿ ಇಟ್ಟುಕೊಂಡು ನಿರ್ಮಿಸಲು ಸರಕಾರ ತೀರ್ಮಾನಿಸಿದೆ. ಸ್ಥಳ ಪರಿಶೀಲನೆಯ ಬಳಿಕ ಪ್ರಾಧಿಕಾರದ ಅಭಿಪ್ರಾಯ ಏನೆಂಬುದನ್ನು ತಿಳಿದುಕೊಂಡು, ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
ಪ್ರಾಧಿಕಾರದ ತಂಡದಲ್ಲಿ ಜನರಲ್ ಮ್ಯಾನೇಜರ್ ವಿಕ್ರಮ್ ಸಿಂಗ್, ಜಂಟಿ ಜನರಲ್ ಮ್ಯಾನೇಜರ್ ಕೆ. ಶ್ರೀನಿವಾಸರಾವ್, ಸಹಾಯಕ ಜನರಲ್ ಮ್ಯಾನೇಜರ್ ಮನುಜ್ ಭಾರದ್ವಾಜ್, ಪ್ರಧಾನ ಕಚೇರಿಯ ಅಧಿಕಾರಿಗಳಾದ ಸಚ್ಚಿದಾನಂದ್, ಸಂತೋಷಕುಮಾರ್ ಭಾರತಿ, ಅಮನ್ ಚಿಪಾ ಇದ್ದರು.
ಸರಕಾರದ ಪರವಾಗಿ ಮೂಲಸೌಕರ್ಯ ಇಲಾಖೆ ಕಾರ್ಯದರ್ಶಿ ಎನ್.ಮಂಜುಳಾ, ಹೆಚ್ಚುವರಿ ಕಾರ್ಯದರ್ಶಿ ಹೆಪ್ಸಿಬಾ ರಾಣಿ, ಕರ್ನಾಟಕ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಖುಷ್ಬೂ ಗೋಯಲ್, ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಹಾಜರಿದ್ದರು.
ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…
ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…
ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…
ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…
ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…