ಬೆಂಗಳೂರು : ಎಲೆಕ್ಟ್ರಾನಿಕ್ ಸಿಟಿ ವ್ಯಾಪ್ತಿಯಲ್ಲಿ ನಾಪತ್ತೆಯಾಗಿದ್ದ ನಾಲ್ಕೂವರೆ ವರ್ಷದ ಬಾಲಕಿ ಶವವಾಗಿ ಪತ್ತೆಯಾಗಿದ್ದು, ಈ ಘಟನೆ ನಗರವನ್ನು ಬೆಚ್ಚಿಬೀಳಿಸಿದೆ. ಬಾಲಕಿಯ ಶವ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ಬೋಳುಗುಟ್ಟದ ನಿರ್ಜನ ಪ್ರದೇಶದ ನೀಲಗಿರಿ ತೋಪಿನಲ್ಲಿ ಪತ್ತೆಯಾಗಿದೆ.
ಬಾಲಕಿ ಗುರುವಾರ ಸಂಜೆ ಆಟವಾಡುತ್ತಿದ್ದಾಗ ನಾಪತ್ತೆಯಾಗಿದ್ದಳು. ಪೋಷಕರು ಹುಡುಕಾಟ ನಡೆಸಿದರೂ ಪತ್ತೆಯಾಗದ ಹಿನ್ನೆಲೆಯಲ್ಲಿ ಶುಕ್ರವಾರ ಮಧ್ಯಾಹ್ನ ಪೊಲೀಸರಿಗೆ ದೂರು ನೀಡಿದ್ದರು.
ಬಳಿಕ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿ, ರಾತ್ರಿ ವೇಳೆಗೆ ಬೋಳುಗುಟ್ಟದ ನಿರ್ಜನ ಪ್ರದೇಶದ ನೀಲಗಿರಿ ತೋಪಿನಲ್ಲಿ ಶವ ಪತ್ತೆ ಮಾಡಿದ್ದರು. ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಳು ಬಾಲಕಿಯ ಗುರುತು ಮರೆಮಾಚಲು ಮುಖವನ್ನು ಕಲ್ಲಿನಿಂದ ಜಜ್ಜಿ ವಿಕೃತವಾಗಿ ಕೊಲೆ ಮಾಡಿದ್ದಾರೆ.
ದೇಹದ ಸ್ಥಿತಿಯನ್ನು ಗಮನಿಸಿದರೆ ಲೈಂಗಿಕ ದೌರ್ಜನ್ಯವೂ ನಡೆದಿರಬಹುದೆಂಬ ಅನುಮಾನವಿದೆ. ಈ ಬಗ್ಗೆ ಮರಣೋತ್ತರ ಪರೀಕ್ಷಾ ವರದಿಯಿಂದ ಸ್ಪಷ್ಟ ಮಾಹಿತಿಗಳು ಸಿಗಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಾಲಕಿಯ ಕುಟುಂಬ ಮೂಲತಃ ಅಸ್ಸಾಂ ಮೂಲದವರಾಗಿದ್ದು, ತಂದೆ ಅಪಾರ್ಟ್‌ಮೆಂಟ್‌ನಲ್ಲಿ ಹೌಸ್‌ಕೀಪಿಂಗ್ ಕೆಲಸ ಮಾಡುತ್ತಿದ್ದು, ಜೊತೆಗೆ ಕಸದ ಸಂಗ್ರಹಣೆಯ ಕೆಲಸವೂ ಮಾಡುತ್ತಿದ್ದರು. ಕುಟುಂಬ ತಾತ್ಕಾಲಿಕ ಶೆಡ್‌ನಲ್ಲಿ ವಾಸಿಸುತ್ತಿತ್ತು ಎಂದು ತಿಳಿದುಬಂದಿದೆ.
ಆರೋಪಿಗಳು ಬಾಲಕಿಗೆ ಪರಿಚಿತರಾಗಿರುವ ಸಾಧ್ಯತೆ ಇದೆ. ಆಮಿಷ ನೀಡಿ ಆಕೆಯನ್ನು ಕರೆದೊಯ್ದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ವೈಷಮ್ಯದ ಆಯಾಮದಲ್ಲೂ ತನಿಖೆ ನಡೆಯುತ್ತಿದೆ. ಈ ಸಂಬಂಧ ಅಪಹರಣ, ಕೊಲೆ ಹಾಗೂ ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ಪ್ರಕರಣ ದಾಖಲಾಗಿದ್ದು, ಆರೋಪಿಗಳನ್ನು ಪತ್ತೆಹಚ್ಚಲು ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮುಂಬೈ : 13 ವರ್ಷಗಳ ಸೋಲಿನ ಓಟಕ್ಕೆ ಬ್ರೇಕ್ ಹಾಕಿದ ಮುಂಬೈ ಇಂಡಿಯನ್ಸ್ ಕೊನೆಗೂ ಐಪಿಎಲ್‌ನ ಮೊದಲ ಪಂದ್ಯವನ್ನು ಭರ್ಜರಿಯಾಗಿ…
ಹೊಸದಿಲ್ಲಿ : ಕಳೆದ ವಾರ ನಡೆದ ಷೇರುಪೇಟೆ ವಹಿವಾಟಿನಲ್ಲಿ ಸೂಚ್ಯಂಗಳು ಇಳಿಕೆ ಕಂಡಿದ್ದರಿಂದ ದೇಶದ ಪ್ರಮುಖ 10 ಕಂಪನಿಗಳ ಪೈಕಿ…
ಮುಂಬೈ : ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ಭಾಗಶಃ ಅನುಮತಿ ನೀಡಿದ ನಂತರ ಭಾರತ ಧ್ವಜ ಹೊತ್ತ ಎರಡು ಎಲ್‌ಪಿಜಿ (ದ್ರವೀಕೃತ…
ಮೇಲುಕೋಟೆ : ವೈಷ್ಣವ ಪರಂಪರೆಯ ಅತ್ಯಂತ ಪ್ರಸಿದ್ಧ ಮತ್ತು ವಿಶ್ವವಿಖ್ಯಾತ ವೈರಮುಡಿ ಬ್ರಹ್ಮೋತ್ಸವ ಶನಿವಾರ ರಾತ್ರಿಯಿಡಿ ಮೇಲುಕೋಟೆ ಶ್ರೀ ಚೆಲುವನಾರಾಯಣಸ್ವಾಮಿ…
ಗುವಾಹಟಿ : ಅಸ್ಸಾಂ ವಿಧಾನಸಭಾ ಚುನಾವಣೆಗೆ ರಾಜಕೀಯ ಕಾರ್ಯತಂತ್ರ ರೂಪಿಸಿರುವ ಕಾಂಗ್ರೆಸ್ ಪಕ್ಷವೂ ಪಂಚ ಗ್ಯಾರಂಟಿಗಳನ್ನು ಘೋಷಿಸಿದೆ. ಎಐಸಿಸಿ ಅಧ್ಯಕ್ಷ…
ಬೆಂಗಳೂರು : ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ ಆಟೋ ಎಲ್.ಪಿ.ಜಿಗೆ ಯಾವುದೇ…