Mysore
19
broken clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ಬೆಂಗಳೂರು: ತಾಜ್‌ ವೆಸ್ಟ್‌ ಎಂಡ್‌ ಹೋಟೆಲ್‌ಗೆ ಬಾಂಬ್‌ ಬೆದರಿಕೆ

ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಬಾಂಬ್‌ ಬೆದರಿಕೆ ಸಂದೇಶಗಳು ಹೆಚ್ಚುತ್ತಿದ್ದು,  ಶಾಲಾ-ಕಾಲೇಜು, ವಿಮಾನ ನಿಲ್ದಾಣ ಹಾಗೂ ಪ್ರಮುಖ ಹೋಟೆಲ್‌ಗಳಿಗೆ ಬೆದರಿಕೆ ಸಂದೇಶಗಳು ಬರುತ್ತಿದೆ. ಅದರಂತೆ  ನಗರದ ಪ್ರಮುಖ  ಹೋಟೆಲ್‌ ಆಗಿರುವ ತಾಜ್‌ ವೆಸ್ಟ್‌ ಎಂಡ್‌ಗೆ ಇಂದು ಅಪರಿಚಿತ ದುಷ್ಕರ್ಮಿಯಿಂದ ಇ-ಮೇಲ್‌ ಮೂಲಕ ಬಾಂಬ್‌ ಬೆದರಿಕೆಯ ಸಂದೇಶ ರವಾನೆಯಾಗಿದೆ ಎಂದು ತಿಳಿದು ಬಂದಿದೆ.

ಈ ಬಗ್ಗೆ ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ. ಇಂದು ಬೆಳಿಗ್ಗೆ ಹೋಟೆಲ್‌ನ ಸಿಬ್ಬಂದಿಯು ಬಾಂಬ್‌ ಬೆದರಿಕೆ ಸಂದೇಶವನ್ನು ಗಮನಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮತ್ತು ನಿಷ್ಕ್ರಿಯ ದಳದವರು ಸ್ಥಳಕ್ಕೆ ಆಗಮಿಸಿ ಬಾಂಬ್‌ ತಪಾಸಣೆಯನ್ನು ಮಾಡಿದ್ದಾರೆ.

ಈ ಕುರಿತು ಬೆಂಗಳೂರು ಕೇಂದ್ರ ಡಿಸಿಪಿ ಶೇಖರ್‌ ಮಾತನಾಡಿ, ಹೋಟೆಲ್‌ ಸಿಬ್ಬಂದಿಯ ಮಾಹಿತಿಯ ಮೇರೆಗೆ ಸ್ಥಳೀಯ ಪೊಲೀಸರು ಹಾಗೂ ಬಾಂಬ್‌ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

Tags: