ಬೆಂಗಳೂರು: ಇತ್ತೀಚೆಗೆ ನಗರದಲ್ಲಿ ಬಾಂಬ್ ಬೆದರಿಕೆ ಸಂದೇಶಗಳು ಹೆಚ್ಚುತ್ತಿದ್ದು, ಶಾಲಾ-ಕಾಲೇಜು, ವಿಮಾನ ನಿಲ್ದಾಣ ಹಾಗೂ ಪ್ರಮುಖ ಹೋಟೆಲ್‌ಗಳಿಗೆ ಬೆದರಿಕೆ ಸಂದೇಶಗಳು ಬರುತ್ತಿದೆ. ಅದರಂತೆ ನಗರದ ಪ್ರಮುಖ ಹೋಟೆಲ್ ಆಗಿರುವ ತಾಜ್ ವೆಸ್ಟ್ ಎಂಡ್‌ಗೆ ಇಂದು ಅಪರಿಚಿತ ದುಷ್ಕರ್ಮಿಯಿಂದ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯ ಸಂದೇಶ ರವಾನೆಯಾಗಿದೆ ಎಂದು ತಿಳಿದು ಬಂದಿದೆ.
ಈ ಬಗ್ಗೆ ಸುದ್ದಿಸಂಸ್ಥೆ ಎಎನ್‌ಐ ವರದಿ ಮಾಡಿದೆ. ಇಂದು ಬೆಳಿಗ್ಗೆ ಹೋಟೆಲ್‌ನ ಸಿಬ್ಬಂದಿಯು ಬಾಂಬ್ ಬೆದರಿಕೆ ಸಂದೇಶವನ್ನು ಗಮನಿಸಿ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮತ್ತು ನಿಷ್ಕ್ರಿಯ ದಳದವರು ಸ್ಥಳಕ್ಕೆ ಆಗಮಿಸಿ ಬಾಂಬ್ ತಪಾಸಣೆಯನ್ನು ಮಾಡಿದ್ದಾರೆ.
ಈ ಕುರಿತು ಬೆಂಗಳೂರು ಕೇಂದ್ರ ಡಿಸಿಪಿ ಶೇಖರ್ ಮಾತನಾಡಿ, ಹೋಟೆಲ್ ಸಿಬ್ಬಂದಿಯ ಮಾಹಿತಿಯ ಮೇರೆಗೆ ಸ್ಥಳೀಯ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳ ಸ್ಥಳಕ್ಕೆ ಧಾವಿಸಿ ತಪಾಸಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…