ಬೆಂಗಳೂರು: ಕುಮಾರಸ್ವಾಮಿ ಲೇಔಟ್‌ನ ಚಂದ್ರಾನಗರದ ಮನೆಯೊಂದರ ಮೇಲೆ ಸಿಸಿಬಿ ದಾಳಿ ನಡೆಸಿ ಸುಮಾರು 71 ಲಕ್ಷ ರೂ. ಡ್ರಗ್ಸ್ ವಶಕ್ಕೆ ಪಡೆದಿದ್ದು, ನಾಲ್ವರರನ್ನು ಬಂಧಿಸಿದ್ದಾರೆ.
ಬೆಂಗಳೂರು ನಗರ ಪೊಲೀಸರು ಹಾಗೂ ಸಿಸಿಬಿ ಪೊಲೀಸರು 2025ರ ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಡ್ರಗ್ ಪೆಡ್ಲರ್‌ಗಳು ಹಾಗೂ ವ್ಯಸನಿಗಳ ಮೇಲೆ ಕಣ್ಣಿಟ್ಟಿದ್ದು, ನಗರದಲ್ಲಿ ಕಾರ್ಯಾಚರಣೆ ಪ್ರಾರಂಭಿಸಿಕೊಂಡಿದ್ದರು. ಅಂತೆಯೇ ದಾಳಿ ನಡೆಸಿದ ಅಧಿಕಾರಿಗಳಿಗೆ ಆರೋಪಿಗಳು ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಬಂಧಿತ ಆರೋಪಿಗಳನ್ನು ಅಜಿತ್, ಕಾರ್ತಿಕ್ ಹಾಗೂ ರಾಕೇಶ್ ಎಂದು ಗುರುತಿಸಲಾಗಿದೆ. ಈ ಆರೋಪಿಗಳಲ್ಲಿ ಕೇರಳ ಮೂಲದ ಒಬ್ಬ ವ್ಯಕ್ತಿ ಹಾಗೂ ಇಬ್ಬರು ಡ್ರಗ್ ಪೆಡ್ಲರ್‌ಗಳಾಗಿದ್ದಾರೆ.
ಈ ಕುರಿತು ಸಿಸಿಬಿ ಅಧಿಕಾರಿಗಳು ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸುವ ವೇಳೆ ಕೇರಳ ಮೂಲದಿಂದ ಡ್ರಗ್ಸ್ ಅನ್ನು ತೆಗೆದುಕೊಂಡು ಬಂದು ಚಂದ್ರಾನಗರದ ಮನೆಯೊಂದರರಲ್ಲಿ ಮಾದಕ ವಸ್ತುಗಳನ್ನು ಕಡಿಮೆಗೆ ಮಾರಾಟ ಮಾಡುತ್ತಿದ್ದೇವು ಎಂಬ ಅಂಶವನ್ನು ತಿಳಿಸಿದ್ದಾರೆ. ಅಂತೆಯೇ ಆ ಮನೆಯ ಮೇಲೆ ದಾಳಿ ನಡೆಸಿದ ಅಧಿಕಾರಿಗಳು 15.05 ಗ್ರಾಂ ಎಂಡಿಎಂಎ ಕ್ರಿಸ್ಟಲ್, 520 ಗ್ರಾಂ ಹೈಡ್ರೋ ಗಾಂಜಾ, ಸುಮಾರು 2 ಕೆ.ಜಿ. 223 ಗ್ರಾಂ ಗಾಂಜಾ ಹಾಗೂ ತೂಕದ ಯಂತ್ರ ಸೇರಿದಂತೆ ಮೊಬೈಲ್ ಅನ್ನು ವಶಕ್ಕೆ ಪಡೆದಿದ್ದಾರೆ.





