ಬೆಂಗಳೂರು: ಇಂದಿನಿಂದ ಬಸನವಗುಡಿಯಲ್ಲಿ ಇತಿಹಾಸ ಪ್ರಸಿದ್ಧ ಕಡಲೆಕಾಯಿ ಪರಿಷೆ ಆರಂಭಗೊಂಡಿದ್ದು, ಅಧಿಕೃತ ಚಾಲನೆ ಸಿಕ್ಕಿದೆ.
ದೊಡ್ಡಗಣಪ ಹಾಗೂ ದೊಡ್ಡ ಬಸವನ ಸನ್ನಿಧಾನದಲ್ಲಿ ಬಿಬಿಎಂಪಿ ಹಾಗೂ ಮುಜರಾಯಿ ಇಲಾಖೆ ಜಂಟಿಯಾಗಿ ಆಯೋಜಿಸಿರುವ ಕಡಲೆಕಾಯಿ ಪರಿಷೆಗೆ ಅಧಿಕೃತ ಚಾಲನೆ ಸಿಕ್ಕಿದೆ.
ಈ ಬಾರಿಯ ವಿಶೇಷವೆಂದರೆ ಇದೇ ಮೊದಲನೇ ಬಾರಿಗೆ ಹಾಕಿರುವ ಸುಮಾರು 4-5 ಸಾವಿರ ಅಂಗಡಿಗಳಿಗೆ ಶುಲ್ಕ ರಹಿತವಾಗಿ ಅವಕಾಶ ಮಾಡಿಕೊಡಲಾಗಿದೆ.
ಜೊತೆಗೆ ಇದೇ ಮೊದಲ ಬಾರಿಗೆ ರಾಮಕೃಷ್ಣ ಆಶ್ರಮ ವೃತ್ತ, ಗಣೇಶ್ ಭವನ್ ವೃತ್ತ ಹಾಗೂ ಸುತ್ತಮುತ್ತಲಿನ ರಸ್ತೆಗಳಿಗೆ ವಿಜೃಂಭಣೆಯ ದೀಪಾಲಂಕಾರ ಮಾಡಲಾಗಿದೆ.
ಇಂದು ಸಂಜೆಯ ವೇಳೆಗೆ ಕೆಂಪಾಬುದಿ ಕೆರೆಯಲ್ಲಿ ತೆಪ್ಪೋತ್ಸವ ನಡೆಯಲಿದೆ. ಸಾರ್ವಜನಿಕರು ಸರತಿ ಸಾಲಿನಲ್ಲಿ ನಿಂತು ಬಸವನ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ.
ಕಡಲೆಕಾಯಿ ಪರಿಷೆಗೆ ರಾಜ್ಯ ಹಾಗೂ ನೆರೆ ರಾಜ್ಯಗಳಿಂದ 3 ಸಾವಿರಕ್ಕೂ ಹೆಚ್ಚು ವ್ಯಾಪಾರಸ್ಥರು ಬಂದಿರುವುದು ವಿಶೇಷವೆನಿಸಿದೆ.
ಇನ್ನು ಈ ವರ್ಷ ಕಡಲೆಕಾಯಿ ಬೆಲೆ ಸ್ವಲ್ಪ ಏರಿಕೆ ಕಂಡುಬಂದಿದ್ದು, ಕೆಜಿಗೆ 50-70ರೂ ಇದೆ ಎಂಬ ಮಾಹಿತಿ ಲಭ್ಯವಾಗಿದೆ.