ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಎಇಸಿಎಸ್ ಲೇಔಟ್‌ನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಮೂರು ದಿನಗಳ ನಂತರ ಕೊನೆಗೂ ಬುಧವಾರ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದ್ದು, ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.
ಅಕ್ಟೋಬರ್ 27 ರಂದು ರಾತ್ರಿ ಚಿರತೆ ಅಪಾರ್ಟ್‌ಮೆಂಟ್ ಸಮುಚ್ಚಯದ ಬಳಿ ತಿರುಗಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅಂದಿನಿಂದ ಚಿರತೆ ಕಾಣಿಸಿಕೊಂಡಿರಲಿಲ್ಲ. ಆದರೆ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರದಿಂದ ಚಿರತೆಯನ್ನು ಸೆರೆ ಹಿಡಿಯಲು ಆಯಕಟ್ಟಿನ ಸ್ಥಳಗಳಲ್ಲಿ ನಾಲ್ಕು ಬೋನುಗಳನ್ನು ಇಡಲಾಗಿತ್ತು. ಅಲ್ಲದೆ ಚಿರಿತೆ ಸೆರೆಗೆ ಐದು ತಂಡಗಳನ್ನು ನಿಯೋಜಿಸಲಾಗಿತ್ತು.
ಇಂದು ಬೆಳಗ್ಗೆ ಆನೇಕಲ್ ತಾಲೂಕಿನ ಬೊಮ್ಮನಹಳ್ಳಿಯ ಕೂಡ್ಲು ಗೇಟ್ ಬಳಿ ಕೃಷ್ಣಾ ರೆಡ್ಡಿ ಬಡಾವಣೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ಚಿರತೆ ಇರುವ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸಿದರು.
ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಿದ್ದಾರೆ. ಆದರೆ ಚುಚ್ಚುಮುದ್ದಿಗೂ ಬಗ್ಗದ ಚಿರತೆ ಕಟ್ಟಡದ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಜಿಗಿದು ವೈದ್ಯ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿ ಪರಾರಿಯಾಗಿತ್ತು.
ಇಂದು ಮಧ್ಯಾಹ್ನ ಬೊಮ್ಮನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಅರಣ್ಯ ಇಲಾಖೆ ಹಾಕಿದ್ದ ಬಲೆಗೆ ಚಿರತೆ ಬಿದ್ದಿದೆ. ಚಿರತೆಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ, ಅದನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸುತ್ತಿದ್ದಾರೆ.
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…
ಗುಂಡ್ಲುಪೇಟೆ: ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆ ತಾಲ್ಲೂಕಿನಲ್ಲಿರುವ ರಾಷ್ಟ್ರೀಯ ಉದ್ಯಾನವನ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕುಂದಕೆರೆ ವಲಯದ ಚಿಕ್ಕ…
ಲಕ್ನೋ: ಆಕರ್ಷಣೀಯ ಪ್ರವಾಸಿತಾಣಗಳ ಪಟ್ಟಿಯಲ್ಲಿ ಅಯೋಧ್ಯೆ ರಾಮಮಂದಿರವು ತಾಜ್ಮಹಲನ್ನು ಹಿಂದಿಕ್ಕಿ ನಂಬರ್ ಒನ್ ಪಟ್ಟ ಪಡೆದಿದೆ. ಈ ಮೂಲಕ ಈಗ…
ಚಿಕ್ಕಬಳ್ಳಾಪುರ: ನಂದಿಗಿರಿಧಾಮದಲ್ಲಿ ಹೊ ವರ್ಷಾಚರಣೆಗೆ ಬ್ರೇಕ್ ನೀಡಲಾಗಿದ್ದು, ಪ್ರವಾಸಿಗರಿಗೆ ಬಿಗ್ ಶಾಕ್ ಎದುರಾಗಿದೆ. ಪ್ರಕೃತಿ ಮಡಿಲಿನಲ್ಲಿ ಕುಣಿಸು ಕುಪ್ಪಳಿಸಿ ಹೊಸ…