ರಾಜ್ಯ

ಬೆಂಗಳೂರು| 3 ದಿನಗಳ ನಂತರ ಕೊನೆಗೂ ಬಲೆಗೆಬಿದ್ದ ಚಿರತೆ: ನಿಟ್ಟುಸಿರು ಬಿಟ್ಟ ಸ್ಥಳೀಯರು

ಬೆಂಗಳೂರು: ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದ ಎಇಸಿಎಸ್ ಲೇಔಟ್‌ನಲ್ಲಿ ಕಾಣಿಸಿಕೊಂಡಿದ್ದ ಚಿರತೆ ಮೂರು ದಿನಗಳ ನಂತರ ಕೊನೆಗೂ ಬುಧವಾರ ಅರಣ್ಯ ಇಲಾಖೆಯ ಬಲೆಗೆ ಬಿದ್ದಿದ್ದು, ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ.

ಅಕ್ಟೋಬರ್ 27 ರಂದು ರಾತ್ರಿ ಚಿರತೆ ಅಪಾರ್ಟ್‌ಮೆಂಟ್ ಸಮುಚ್ಚಯದ ಬಳಿ ತಿರುಗಾಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅಂದಿನಿಂದ ಚಿರತೆ ಕಾಣಿಸಿಕೊಂಡಿರಲಿಲ್ಲ. ಆದರೆ ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಅರಣ್ಯ ಇಲಾಖೆ ಸಿಬ್ಬಂದಿ ಭಾನುವಾರದಿಂದ ಚಿರತೆಯನ್ನು ಸೆರೆ ಹಿಡಿಯಲು ಆಯಕಟ್ಟಿನ ಸ್ಥಳಗಳಲ್ಲಿ ನಾಲ್ಕು ಬೋನುಗಳನ್ನು ಇಡಲಾಗಿತ್ತು. ಅಲ್ಲದೆ ಚಿರಿತೆ ಸೆರೆಗೆ ಐದು ತಂಡಗಳನ್ನು ನಿಯೋಜಿಸಲಾಗಿತ್ತು.

ಇಂದು ಬೆಳಗ್ಗೆ ಆನೇಕಲ್ ತಾಲೂಕಿನ ಬೊಮ್ಮನಹಳ್ಳಿಯ ಕೂಡ್ಲು ಗೇಟ್‌ ಬಳಿ‌ ಕೃಷ್ಣಾ ರೆಡ್ಡಿ ಬಡಾವಣೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ಚಿರತೆ ಇರುವ ಬಗ್ಗೆ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ ಕೂಡಲೇ ಸ್ಥಳಕ್ಕೆ ದೌಡಾಯಿಸಿ ಕಾರ್ಯಾಚರಣೆ ನಡೆಸಿದರು.

ಈ ವೇಳೆ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆಗೆ ಅರವಳಿಕೆ ಚುಚ್ಚುಮದ್ದು ನೀಡಿದ್ದಾರೆ. ಆದರೆ ಚುಚ್ಚುಮುದ್ದಿಗೂ ಬಗ್ಗದ ಚಿರತೆ ಕಟ್ಟಡದ ಒಂದು ಭಾಗದಿಂದ ಇನ್ನೊಂದು ಭಾಗಕ್ಕೆ ಜಿಗಿದು ವೈದ್ಯ ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ದಾಳಿ ಮಾಡಿ ಪರಾರಿಯಾಗಿತ್ತು.

ಇಂದು ಮಧ್ಯಾಹ್ನ ಬೊಮ್ಮನಹಳ್ಳಿಯ ಕೈಗಾರಿಕಾ ಪ್ರದೇಶದಲ್ಲಿ ಅರಣ್ಯ ಇಲಾಖೆ ಹಾಕಿದ್ದ ಬಲೆಗೆ ಚಿರತೆ ಬಿದ್ದಿದೆ. ಚಿರತೆಯನ್ನು ಸೆರೆ ಹಿಡಿದ ಅರಣ್ಯ ಇಲಾಖೆ ಸಿಬ್ಬಂದಿ, ಅದನ್ನು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಸ್ಥಳಾಂತರಿಸುತ್ತಿದ್ದಾರೆ.

andolanait

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

22 mins ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

24 mins ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

26 mins ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

27 mins ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

34 mins ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

41 mins ago