Mysore
22
scattered clouds

Social Media

ಗುರುವಾರ, 02 ಏಪ್ರಿಲ 2026
Light
Dark

ಬೆಂಗಳೂರು ದರೋಡೆ ಪ್ರಕರಣ: ಮತ್ತೆ ಮೂವರ ಬಂಧನ

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಹಾಡಹಗಲೇ 7.11 ಕೋಟಿ ಹಣ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಹೈದರಾಬಾದ್‌ನ ಲಾಡ್ಜ್‌ನಲ್ಲಿ ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಬೆಂಗಳೂರಿನ ಸಿದ್ದಾಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ 70 ಲಕ್ಷ ರೂಪಾಯಿ ಹಣ ಜಪ್ತಿ ಮಾಡಲಾಗಿದೆ.

ಬೆಂಗಳೂರಿನ ಡೇರಿ ಸರ್ಕಲ್‌ ಬಳಿ ನಡೆದಿದ್ದ 7.11 ಕೋಟಿ ದರೋಡೆ ಪ್ರಕರಣದಲ್ಲಿ ಈವರೆಗೆ ಪೊಲೀಸರು 6.45 ಲಕ್ಷ ಹಣ ಜಪ್ತಿ ಮಾಡಿದ್ದಾರೆ. ಸದ್ಯ ಮತ್ತೆ ಮೂವರನ್ನು ವಶಕ್ಕೆ ಪಡೆದಿದ್ದು, ಬೆಂಗಳೂರಿಗೆ ಕರೆತಂದು ವಿಚಾರಣೆ ನಡೆಸಲಾಗುತ್ತಿದೆ.

Tags:
error: Content is protected !!