Resign and Fulfill the Aspirations of Kannadigas: Opposition Leader R. Ashoka
ಬೆಂಗಳೂರು: ರಾಜಧಾನಿ ಬೆಂಗಳೂರಿನ ರಸ್ತೆಗುಂಡಿಗಳಿಂದ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮರ್ಯಾದೆ ಹರಾಜಾಗುತ್ತಿದ್ದು, ಮೊದಲು ಅವುಗಳನ್ನು ಮುಚ್ಚಿ ನಂತರ ಬೇಕಾದರೆ ಚಂದ್ರಲೋಕಕ್ಕೆ ಟನಲ್ ನಿರ್ಮಾಣ ಮಾಡಿ ಎಂದು ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್.ಅಶೋಕ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯ ಸರ್ಕಾರದ ಉದ್ದೇಶಿತ ಟನಲ್ ಯೋಜನೆಯನ್ನು ವಿರೋಧಿಸಿ ಲಾಲ್‍ಬಾಗ್‍ನಲ್ಲಿ ಸಾರ್ವಜನಿಕರು, ಸಂಘಸಂಸ್ಥೆಗಳು ಮತ್ತಿತರರ ಜೊತೆ ಸಂವಾದ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ನಗರದಲ್ಲಿ ಗುಂಡಿಗಳನ್ನು ಮುಚ್ಚಲು ಯೋಗ್ಯತೆ ಇಲ್ಲದ ಸರ್ಕಾರ ಟನಲ್ ನಿರ್ಮಾಣ ಮಾಡುತ್ತೇನೆಂದು ಬೊಗಳೆ ಬಿಡುತ್ತಿದೆ. ಒಂದು ಕಾಲದಲ್ಲಿ ಬೆಂಗಳೂರು ನಗರವನ್ನು ವಿಶ್ವವೇ ನೋಡುತ್ತಿತ್ತು. ಈಗ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಉದ್ಯಮಿಗಳು ಇಲ್ಲಿಗೆ ಬರಲು ಹಿಂದೇಟು ಹಾಕುತ್ತಿದ್ದಾರೆ. ಇದು ಕರ್ನಾಟಕದ ಮತ್ತು ಕನ್ನಡಿಗರ ದೌರ್ಭಾಗ್ಯ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನು ಓದಿ: ಓದುಗರ ಪತ್ರ: ರಸ್ತೆ ಗುಂಡಿ ಮುಚ್ಚಲು ಕ್ರಮ ವಹಿಸಿ
ಮೊದಲು ಗುಂಡಿಗಳನ್ನು ಮುಚ್ಚಿ ಪ್ರತಿದಿನ ಆಗುತ್ತಿರುವ ರಸ್ತೆ ಅಪಘಾತಗಳನ್ನು ತಪ್ಪಿಸಿ. ಅಕ್ಟೋಬರ್ 30ರೊಳಗೆ ಗುಂಡಿಗಳನ್ನು ಮುಚ್ಚಬೇಕೆಂದು ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಅಧಿಕಾರಿಗಳಿಗೆ ಸೂಚಿಸಿದ್ದರು. ಆದರೆ ಡೆಡ್‍ಲೈನ್ ಮುಗಿದಿದ್ದರೂ ಡೆತ್‍ಗಳು ಮಾತ್ರ ಸಂಭವಿಸುತ್ತಲೇ ಇವೆ. ಇದಕ್ಕೆ ಯಾರು ಹೊಣೆ ಎಂದು ಪ್ರಶ್ನೆ ಮಾಡಿದರು.
ಸಸ್ಯಕಾಶಿಗೆ ರಾಜ್ಯ ಸರ್ಕಾರ ಗುಂಡಿ ತೋಡುವ ಕೆಲಸ ಮಾಡುತ್ತಿದೆ. ಇದಕ್ಕೆ ವಿರೋಧವಾಗಿ ಬಿಜೆಪಿಯವರು ಸೇರಿದ್ದೇವೆ. ಸಾಕಷ್ಟು ಜನ ಬಂದಿದ್ದರು. ಮೌನವಾಗಿ ನಾವು ಪ್ರತಿಭಟನೆ ಮಾಡಿದ್ದೇವೆ. ಸುರಂಗ ಯೋಜನೆಯಿಂದ ಬೆಂಗಳೂರಿನ ಪರಿಸರ ಹಾಳಾಗುತ್ತದೆ. ಬೆಂಗಳೂರಿನ ಜನರು ನಿದ್ದೆಗೆಡುವಂತಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು.
ಇದು ಟನಲ್ ರಸ್ತೆ ಅಲ್ಲ ವಿಐಪಿ ಕಾರಿಡಾರ್ ಆಗುತ್ತದೆ. ಶೇ.90ರಷ್ಟು ಬಡವರು, ಮಧ್ಯಮ ವರ್ಗದವರು ಬಳಸುವ ಬೈಕ್, ಸೈಕಲ್‍ಗೆ ಪ್ರವೇಶವಿಲ್ಲ. ಕೇವಲ ಕಾರಿಗೆ ಮಾತ್ರ ಪ್ರವೇಶವಿದೆ. ಹಾಗಾಗಿ ಇದು ವಿಐಪಿ ರಸ್ತೆ ಎಂದು ಆಕ್ಷೇಪಿಸಿದರು.
ಈ ಯೋಜನೆಗೆ 8 ಸಾವಿರ ಕೋಟಿ ಟೆಂಟರ್ ಕರೆದಿದ್ದಾರೆ. 4 ಸಾವಿರ ಕೋಟಿ ಪಾವತಿ ಮಾಡಬೇಕು. ಇದಕ್ಕಾಗಿ ಸಾಲ ಮಾಡಲು ಹೊರಟಿದ್ದಾರೆ. ಅದಕ್ಕೆ ಬಡ್ಡಿ ಎಲ್ಲಿಂದ ಕೊಡುತ್ತಾರೆ? ಆರ್ಥಿಕ ಪರಿಸ್ಥಿತಿಯನ್ನು ಪಾತಾಳಕ್ಕೆ ತಳ್ಳುವ ಯೋಜನೆ ಇದಾಗಿದೆ. ಭೂಮಿಯ ಆಳದಲ್ಲಿ ಮಾಡಲು ಹೊರಟ್ಟಿದ್ದಾರೆ ಎಂದು ಕಿಡಿಕಾರಿದರು.
ಮಹಾದೇಶ್ ಎಂ ಗೌಡ ಹನೂರು: ತಮ್ಮ ಊರಿನಿಂದ ದೂರದಲ್ಲಿರುವ ಶಾಲಾ ಕಾಲೇಜುಗಳಿಗೆ ಹೋಗುವುದಕ್ಕೆ ಸಮರ್ಪಕವಾಗಿ ಬಸ್ ಸೌಲಭ್ಯ ಕಲ್ಪಿಸಲು ಕೋರಿ…
ಬಿ.ಎಸ್.ವಿನಯ್ ಮೊನ್ನೆ ಯಳಂದೂರಿನ ಬೀದಿಯಲ್ಲಿ ಸಾಗುತ್ತಿದ್ದಾಗ ಬಳೆಮಂಟಪದ ಮುಂದೆ ಪರಿಚಿತ ಹಿರಿಯರೊಬ್ಬರು ಎದುರಾದರು. ‘ಯಜಮಾನರೇ, ಕಾರ್ಯಕ್ರಮಕ್ಕೆ ಯಾಕೆ ಬರಲಿಲ್ಲ?’ ಕೇಳಿದರೆ…
ವಿನುತ ಕೋರಮಂಗಲ ನಮ್ಮ ಹಟ್ಟಿಯಿಂದ ನಾಲ್ಕೈದು ಕಿ.ಮೀ. ದೂರವಿರುವ ನಮ್ಮೂರಿನ ಕೆರೆಯ ಅಂಗಳಕ್ಕೆ ನಾವೇನು ನಡೆದುಕೊಂಡು ಹೋಗುತ್ತಿರಲಿಲ್ಲ. ಗಂಗೆ ಎಂದು…
ಅಕ್ಷತಾ ಖಾಲಿ ಹಾಳೆಯ ಒಂದೇ ಮಗ್ಗುಲಿನಲ್ಲಿ ಚಿತ್ತಿಲ್ಲದಂತೆ ಬರೆದು, ಪದ ಮಿತಿಯನ್ನು ಬೆರಳು ಲೆಕ್ಕದಲ್ಲಿ ಎಣಿಸಿ, ಪತ್ರಿಕೆಯ ವಿಳಾಸಕ್ಕೆ ಕಳುಹಿಸಿದ…
ಹನೂರು: ತಾಲೂಕಿನ ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯ ಮಲೆ ಮಹದೇಶ್ವರ ಅರಣ್ಯ ಪ್ರದೇಶ ವ್ಯಾಪ್ತಿಯ ಬಳಗುಡ್ಡ ಬಿಟ್ ವ್ಯಾಪ್ತಿಯಲ್ಲಿ ಏಕಕಾಲಕ್ಕೆ ಎರಡು…