Mysore
13
few clouds

Social Media

ಭಾನುವಾರ, 28 ಡಿಸೆಂಬರ್ 2025
Light
Dark

ವಂಚನೆ ಪ್ರಕರಣ: ಬಿಜೆಪಿ ನಾಯಕ ಕೃಷ್ಣಯ್ಯ ಶೆಟ್ಟಿಗೆ ಬಿಗ್‌ ಶಾಕ್‌ 

ಬೆಂಗಳೂರು: ಬ್ಯಾಂಕ್‌ ವಂಚನೆ ಪ್ರಕರಣದಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅಪರಾಧಿ ಎಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ನೀಡಿದೆ.

ಬ್ಯಾಂಕ್‌ ವಂಚನೆ ಪ್ರಕರಣದಲ್ಲಿ ಕೃಷ್ಣಯ್ಯ ಶೆಟ್ಟಿ ತಪ್ಪಿತಸ್ಥರೆಂದು ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಅವರಿಗೆ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಇನ್ನು ಈ ಪ್ರಕರಣದಲ್ಲಿ ನಾಲ್ವರು ಅಪರಾಧಿಗಳಿಗೂ ಶಿಕ್ಷೆ ವಿಧಿಸಲಾಗಿದೆ. ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ, ರೆಡ್ಡಿ ಎಂಟಿವಿ, ಶ್ರೀನಿವಾಸ್‌ ಹಾಗೂ ಮುನಿರಾಜು ಈ ನಾಲ್ಕೂ ಜನರು ತಪ್ಪಿತಸ್ಥರು ಎಂದು ನ್ಯಾಯಮೂರ್ತಿ ಸಂತೋಷ್‌ ಗಜಾನನ ಭಟ್‌ ಅವರಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೇಳಿದೆ.

ಇದು ಮಾತ್ರವಲ್ಲದೇ ಎಲ್ಲಾ ನಾಲ್ವರು ಆರೋಪಿಗಳನ್ನು ದೋಷಿ ಎಂದಿರುವ ನ್ಯಾಯಾಲಯ ಮೂರು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

Tags:
error: Content is protected !!