ವಿಜಯಪುರ : ಏಕಾಏಕಿ ಬ್ಯಾಂಕಿಗೆ ನುಗ್ಗಿ ಪಿಸ್ತೂಲ್ ತೋರಿಸಿ, ಸಿಬ್ಬಂದಿಗಳ ಕೈಕಾಲು ಕಟ್ಟಿ ಸಿನಿಮಾ ಶೈಲಿಯಲ್ಲಿ 23 ಕೋಟಿ ರೂ.ಮೌಲ್ಯದ ಚಿನ್ನಾಭರಣ ಹಾಗೂ 1.4 ಕೋಟಿ ರೂ.ನಗದು ದೋಚಿ ಪರಾರಿಯಾಗಿರುವ ಮುಸುಕುದಾರಿ ದರೋಡೆಕೋರರ ಬಂಧನಕ್ಕೆ ಏಳು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.
ಪೊಲೀಸ್ ಮೂಲಗಳ ಪ್ರಕಾರ ನಿನ್ನೆ ಸಂಜೆ 6 ಗಂಟೆ ಸುಮಾರಿನಲ್ಲಿ ಬ್ಯಾಂಕ್ ಮುಚ್ಚುವ ವೇಳೆಗೆ ಠೇವಣಿ ಫಾರಂ ಕೇಳುವ ನೆಪ ಮಾಡಿಕೊಂಡು ಬ್ಯಾಂಕಿಗೆ ಒಬ್ಬ ದರೋಡೆಕೋರ ಕರಿಬಣ್ಣದ ಕೋವಿಡ್ ಮಾಸ್ಕ್, ಬಿಳಿ ಬಣ್ಣದ ಟೋಪಿ ಹಾಗೂ ಕನ್ನಡಕ ಹಾಕಿಕೊಂಡು ಒಳನುಗ್ಗಿದ ನಂತರ ಒಬ್ಬೊಬ್ಬರಾಗಿ ಮೂವರು ಒಳನುಸುಳಿದ ಮುಸುಕುದಾರಿ ದರೋಡೆಕೋರರ ತಂಡ ಏಕಾಏಕಿ ಪಿಸ್ತೂಲ್ ಹೊರ ತೆಗೆದು ಬ್ಯಾಂಕ್ ಸಿಬ್ಬಂದಿಗಳನ್ನು ಬೆದರಿಸಿದರು.
ಬ್ಯಾಂಕ್ ಮ್ಯಾನೇಜರ್ ಹಾಗೂ ಸಿಬ್ಬಂದಿ ಏನಾಗುತ್ತಿದೆ ಎಂದು ಯೋಚಿಸುವಷ್ಟರಲ್ಲಿ ದರೋಡೆಕೋರರು ಅವರ ಪ್ಲಾಸ್ಟಿಕ್ ಟ್ಯಾಗ್‍ನಿಂದ ಕೈಕಾಲು ಕಟ್ಟಿಹಾಕಿ ತಿಜೋರಿಯಲ್ಲಿದ್ದ ಸುಮಾರು 23,61,78,460 ರೂ.ಮೌಲ್ಯದ 20 ಕೆಜಿ ಚಿನ್ನಾಭರಣ ಹಾಗೂ 1.4 ಕೋಟಿ ಹಣವನ್ನು ಬ್ಯಾಗ್‍ನಲ್ಲಿ ತುಂಬಿಸಿಕೊಂಡು ಕ್ಷಣಾರ್ಧದಲ್ಲಿ ಪರಾರಿಯಾಗಿದ್ದಾರೆ.
ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸುವಂತಹ ಬ್ಯಾಂಕ್ ದರೋಡೆ ಮಾಡಿ ಪರಾರಿಯಾಗಿರುವ ದರೋಡೆಕೋರರ ಹೆಡೆಮುರಿ ಕಟ್ಟಲು ವಿಶೇಷ ಪೊಲೀಸ್ ತಂಡಗಳನ್ನು ರಚನೆ ಮಾಡಲಾಗಿದೆ. ಏಕಕಾಲಕ್ಕೆ ಕಾರ್ಯಾಚರಣೆಗೆ ಇಳಿದಿರುವ ಈ ಏಳು ವಿಶೇಷ ಪೊಲೀಸರ ತಂಡಗಳು ಈಗಾಗಲೇ ಮಹಾರಾಷ್ಟ್ರ ಹಾಗೂ ಮತ್ತಿತರ ರಾಜ್ಯಗಳಿಗೆ ಭೇಟಿ ನೀಡಿ ಆರೋಪಿಗಳ ಬಂಧನಕ್ಕೆ ಬಲೆ ಬೀಸಿವೆ. ದರೋಡೆಕೋರರು ಬ್ಯಾಂಕ್ ದರೋಡೆಗೆ ಬಳಸಿದ ಕಾರು ಮಹಾರಾಷ್ಟ್ರದ ಸೊಲ್ಲಾಪುರದ ಬಳಿ ಪತ್ತೆಯಾಗಿದ್ದು, ಅವರು ಕಾರಿನಲ್ಲಿ ಪರಾರಿಯಾಗುತ್ತಿದ್ದ ವೇಳೆ ಮಂಗಳವೆಡೆ ತಾಲ್ಲೂಕಿನ ಹುಲಜಂತಿ ಬಳಿ ರಸ್ತೆಯಲ್ಲಿ ಹೋಗುತ್ತಿದ್ದ ಕುರಿಗಳ ಹಿಂಡಿಗೆ ಡಿಕ್ಕಿ ಹೊಡೆದಿದ್ದರಿಂದ ತಮ್ಮ ಕಾರನ್ನು ಸ್ಥಳದಲ್ಲಿಯೇ ಬಿಟ್ಟು ಹೋಗಿರುವುದು ಗೊತ್ತಾಗಿದೆ.
ಈ ಜಾಡು ಹಿಡಿದಿರುವ ವಿಶೇಷ ಪೊಲೀಸ್ ತಂಡಗಳು ನಾಲ್ಕು ದಿಕ್ಕುಗಳಿಗೂ ಸಂಚರಿಸಿ ದರೋಡೆಕೋರರ ಬಂಧನಕ್ಕೆ ಜಾಲ ಬೀಸಿದ್ದಾರೆ. ದರೋಡೆಕೋರರ ಬಗ್ಗೆ ಖಚಿತ ಮಾಹಿತಿ ದೊರೆತಿದ್ದು, ಆದಷ್ಟು ಬೇಗ ಅವರನ್ನು ಬಂಧಿಸಲಾಗುವುದೆಂದು ಉತ್ತರ ವಲಯ ಐಜಿಪಿ ಚೇತನ್‍ಸಿಂಗ್ ರಾಥೋಡ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಲೋಕಾಯುಕ್ತ ನೀಡಿರುವ ಕ್ಲೀನ್‌ಚಿಟ್ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಮಹತ್ವದ…
ಬೆಂಗಳೂರು: ರಾಜ್ಯ ಸರ್ಕಾರ ಇಂದಿನಿಂದ ಜನವರಿ.31ರವರೆಗೆ ವಿಧಾನಮಂಡಲ ವಿಶೇಷ ಅಧಿವೇಶನ ಕರೆದಿದ್ದು, ನರೇಗಾ ಯೋಜನೆ ಹೆಸರು ಬದಲಾವಣೆ ಆಕ್ಷೇಪಿಸಿ ಕರೆದಿರುವ…
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…