ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ-ನವೆಂಬರ್ ಕ್ರಾಂತಿ ಭಾರೀ ಸದ್ದು ಮಾಡುತ್ತಿದ್ದು, ಈ ನಡುವಲ್ಲೇ ಮಾಜಿ ಸಚಿವ ರಾಜಣ್ಣ ಮನೆಯಲ್ಲಿನ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗುತ್ತಿರುವುದು ಕುತೂಹಲ ಹೆಚ್ಚಾಗುವಂತೆ ಮಾಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಮಕೂರಿನ ಗ್ರಾಮೀಣ ಪ್ರದೇಶದ ಬಿದರಕಟ್ಟೆಯಲ್ಲಿ ವಿಶ್ವವಿದ್ಯಾಲಯ ಕ್ಯಾಂಪಸ್ ಉದ್ಘಾಟಿಸಲಿದ್ದು, ನಂತರ ತುಮಕೂರಿನಲ್ಲಿ ಕ್ಯಾನ್ಸರ್ ಚಿಕಿತ್ಸಾಲಯವನ್ನು ಉದ್ಘಾಟಿಸಲಿದ್ದಾರೆ.
ಇದನ್ನು ಓದಿ: ಬಿಜೆಪಿ ಶಾಸಕರು ಕಾಂಗ್ರೆಸ್ ಔತಣಕೂಟದಲ್ಲಿ ಭಾಗಿ ಬಗ್ಗೆ ಇಂದೇ ವಿಚಾರಿಸುವೆ: ಬಿ.ವೈ.ವಿಜಯೇಂದ್ರ
ಇದರ ಬೆನ್ನಲ್ಲೇ ರಾಜಣ್ಣ ಅವರ ಮನೆಯಲ್ಲಿ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ. ಇದೇ ವೇಳೆ ಗೃಹ ಸಚಿವ ಪರಮೇಶ್ವರ್ ಅವರೂ ಕೂಡ ಮುಖ್ಯಮಂತ್ರಿಗಳಿಗೆ ಸಾಥ್ ನೀಡಲಿದ್ದಾರೆಂದು.ಔತಣಕೂಟದಲ್ಲಿ ಸಿದ್ದರಾಮಯ್ಯ ಅವರು, ರಾಜಣ್ಣ ಅವರನ್ನು ಸಂಪುಟಕ್ಕೆ ಮರಳಿ ಸೇರ್ಪಡೆಗೊಳಿಸುವ ಕುರಿತು ಮಾತುಕತೆ ನಡೆಸಬಹುದು.
ಈ ನಡುವೆ ನವೆಂಬರ್.15ರಂದು ಮುಖ್ಯಮಂತ್ರಿಗಳು ದೆಹಲಿಗೆ ಭೇಟಿ ನೀಡಲಿದ್ದು, ಈ ವೇಳೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಂಪುಟ ಪುನರ್‌ರಚನೆಗೆ ಒಪ್ಪಿಗೆ ಪಡೆಯುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.





