ರಾಜ್ಯ

ಮಾಜಿ ಸಚಿವ ಕೆ.ಎನ್.ರಾಜಣ್ಣ ಮನೆಯಲ್ಲಿ ಔತಣಕೂಟ: ಸಿಎಂ ಸಿದ್ದರಾಮಯ್ಯ ಭಾಗಿ?

ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ-ನವೆಂಬರ್ ಕ್ರಾಂತಿ ಭಾರೀ ಸದ್ದು ಮಾಡುತ್ತಿದ್ದು, ಈ ನಡುವಲ್ಲೇ ಮಾಜಿ ಸಚಿವ ರಾಜಣ್ಣ ಮನೆಯಲ್ಲಿನ ಔತಣಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾಗಿಯಾಗುತ್ತಿರುವುದು ಕುತೂಹಲ ಹೆಚ್ಚಾಗುವಂತೆ ಮಾಡಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತುಮಕೂರಿನ ಗ್ರಾಮೀಣ ಪ್ರದೇಶದ ಬಿದರಕಟ್ಟೆಯಲ್ಲಿ ವಿಶ್ವವಿದ್ಯಾಲಯ ಕ್ಯಾಂಪಸ್ ಉದ್ಘಾಟಿಸಲಿದ್ದು, ನಂತರ ತುಮಕೂರಿನಲ್ಲಿ ಕ್ಯಾನ್ಸರ್ ಚಿಕಿತ್ಸಾಲಯವನ್ನು ಉದ್ಘಾಟಿಸಲಿದ್ದಾರೆ.

ಇದನ್ನು ಓದಿ: ಬಿಜೆಪಿ ಶಾಸಕರು ಕಾಂಗ್ರೆಸ್‌ ಔತಣಕೂಟದಲ್ಲಿ ಭಾಗಿ ಬಗ್ಗೆ ಇಂದೇ ವಿಚಾರಿಸುವೆ: ಬಿ.ವೈ.ವಿಜಯೇಂದ್ರ

ಇದರ ಬೆನ್ನಲ್ಲೇ ರಾಜಣ್ಣ ಅವರ ಮನೆಯಲ್ಲಿ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ. ಇದೇ ವೇಳೆ ಗೃಹ ಸಚಿವ ಪರಮೇಶ್ವರ್ ಅವರೂ ಕೂಡ ಮುಖ್ಯಮಂತ್ರಿಗಳಿಗೆ ಸಾಥ್ ನೀಡಲಿದ್ದಾರೆಂದು.ಔತಣಕೂಟದಲ್ಲಿ ಸಿದ್ದರಾಮಯ್ಯ ಅವರು, ರಾಜಣ್ಣ ಅವರನ್ನು ಸಂಪುಟಕ್ಕೆ ಮರಳಿ ಸೇರ್ಪಡೆಗೊಳಿಸುವ ಕುರಿತು ಮಾತುಕತೆ ನಡೆಸಬಹುದು.

ಈ ನಡುವೆ ನವೆಂಬರ್.15ರಂದು ಮುಖ್ಯಮಂತ್ರಿಗಳು ದೆಹಲಿಗೆ ಭೇಟಿ ನೀಡಲಿದ್ದು, ಈ ವೇಳೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಸಂಪುಟ ಪುನರ್‌ರಚನೆಗೆ ಒಪ್ಪಿಗೆ ಪಡೆಯುವ ನಿರೀಕ್ಷೆಯಿದೆ ಎಂದು ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮಹಿಷ ದಸರಾಗೆ ಡೇಟ್ ಫಿಕ್ಸ್!

ಮೈಸೂರು: ಅಕ್ಟೋಬರ್ 10ರಂದು ಮೈಸೂರಿನಲ್ಲಿ ಮಹಿಷ ದಸರಾ ಆಚರಣೆ ನಡೆಯಲಿದೆ. ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9 ಗಂಟೆಗೆ ಮಹಿಷ ಪ್ರತಿಮೆಗೆ…

6 hours ago

ಮೈಸೂರು ದಸರಾ 2026: ಸಿಎಂ ಡಿ.ಕೆ.ಶಿವಕುಮಾರ್‌ಗೆ ಅಧಿಕೃತ ಆಹ್ವಾನ

ಬೆಂಗಳೂರು: ನಗರಾಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಅವರು ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್…

6 hours ago

ಕಾಡಾನೆಗೆ ಲಾರಿ ಡಿಕ್ಕಿ ಹೊಡೆಸಲು ಯತ್ನ: ಚಾಲಕನಿಗೆ ₹5,000 ದಂಡ

ಚಾಮರಾಜನಗರ: ಗುಂಡ್ಲುಪೇಟೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಅರಣ್ಯ ರಸ್ತೆಯಲ್ಲಿ ರಸ್ತೆ ದಾಟುತ್ತಿದ್ದ ಕಾಡಾನೆಯ ಮೇಲೆಯೇ ಲಾರಿ ಚಲಾಯಿಸಲು ಯತ್ನಿಸಿದ…

6 hours ago

ಅಕ್ಟೋಬರ್.‌11ಕ್ಕೆ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ

ಮಂಡ್ಯ: ಇದೇ ಅಕ್ಟೋಬರ್.‌11ಕ್ಕೆ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್‌ನಲ್ಲಿ ಕಾವೇರಿ ಆರತಿ ಕಾರ್ಯಕ್ರಮ ನಡೆಯಲಿದೆ. ದಸರಾ ಉತ್ಸವದ ಪ್ರಯುಕ್ತ ನಡೆಯಲಿರುವ…

6 hours ago

ಹನೂರು-ಪಾಲಾರ್ ರಸ್ತೆಯ ಕೌದಳ್ಳಿ ಸೇತುವೆ ಹಾನಿ: ಭಾರಿ ವಾಹನ ಸಂಚಾರಕ್ಕೆ ನಿರ್ಬಂಧ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಹನೂರು-ಪಾಲಾರ್ (ಎಲ್ಲೇಮಾಳ-ಕೌದಳ್ಳಿ) ಜಿಲ್ಲಾ ಮುಖ್ಯ…

6 hours ago

ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ..!

ಮೈಸೂರು: ಗಣೇಶ ಹಬ್ಬಕ್ಕೆ ಹಾಸನದಿಂದ ಮೈಸೂರಿಗೆ ಬಂದಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ. 20 ವರ್ಷದ ಗೌರವ್‌…

8 hours ago