ಉಡುಪಿ : ಬಂಟ ಸಮುದಾಯ ವಿಶ್ವದಾದ್ಯಂತ ವಿಸ್ತರಿಸಿ ಉದ್ಯಮ ಆರಂಭಿಸಿ, ಸಮಾಜದ ಎಲ್ಲಾ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದಾರೆ. ಸಮುದಾಯವು ವಿಶಿಷ್ಟ ಸಂಸ್ಕೃತಿ, ಪರಂಪರೆ ಹೊಂದಿದ್ದು, ಕನ್ನಡ ಚರಿತ್ರೆ ಮತ್ತು ಸಂಸ್ಕೃತಿಗೆ ಅಪಾರ ಕೊಡುಗೆ ನೀಡುತ್ತಿದೆ. ಮುಂದಿನ ಬಜೆಟ್‌ನಲ್ಲಿ ಬಂಟರ ಅಭಿವೃದ್ಧಿ ನಿಗಮ ಘೋಷಣೆ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟ ಆಯೋಜಿಸಿದ್ದ ವಿಶ್ವ ಬಂಟರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಬಂಟರು ಸೇರಿ ಮಂಗಳೂರು, ಉಡುಪಿ ಜಿಲ್ಲೆಯವರು ಉದ್ಯಮ ಸಾಹಸಿಗಳು. ವಿಶ್ವದ ಎಲ್ಲಾ ಕಡೆ ಹರಡಿದ್ದು, ತಾವು ಹೋಗುವ ಎಲ್ಲಾ ಕಡೆ ಜನರ ಬೆರೆತು, ಸಹೃದಯತೆಯಿಂದ ಬಾಳುತ್ತಾರೆ. ಇದು ಬಂಟರ ಸಮುದಾಯದ ಹೆಗ್ಗಳಿಕೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಕ್ರೀಡೆ, ಸಿನಿಮಾ, ಶಿಕ್ಷಣ, ಹೋಟೆಲ್ ಉದ್ಯಮ ಸೇರಿ ಎಲ್ಲಾ ಕ್ಷೇತ್ರಗಳಲ್ಲೂ ಬಂಟರು ತಮ್ಮ ಛಾಪು ಮೂಡಿಸಿದ್ದಾರೆ. ಎಲ್ಲೇ ಹೋದರೂ ತಮ್ಮ ಭಾಷೆ, ಸಂಸ್ಕೃತಿಯನ್ನು ಪಸರಿಸುತ್ತಾರೆ. ತುಳು ಮೇಲಿನ ನಿಮ್ಮ ಪ್ರೀತಿ ಮತ್ತು ಅಕ್ಕರೆ ಅನುಕರಣೀಯ. ಇದು ಹೆಮ್ಮೆಯ ವಿಚಾರ. ಪ್ರತಿಯೊಬ್ಬರು ಅವರವರ ಮಾತೃಭಾಷೆಗೆ ಗೌರವ ಕೊಡುವುದರಿಂದ ನಮ್ಮ ಸಂಸ್ಕೃತಿಯ ಹಿರಿಮೆಯನ್ನು ಹೆಚ್ಚಿಸುತ್ತದೆ ಎಂದರು.
ಬಂಟ ಸಮಾಜ ಜಾತ್ಯತೀತ ಸಮುದಾಯ. ಸರ್ವರನ್ನೂ ಸಮಾನ ಪ್ರೀತಿಯಿಂದ ಕಾಣುವ ಮಾನವೀಯ ಮೌಲ್ಯವನ್ನು ಆಚರಿಸುತ್ತಿದೆ. ಇದು ಹೆಮ್ಮೆಯ ಸಂಗತಿ. ಮನುಷ್ಯ ದ್ವೇಷವನ್ನು ಬಂಟ ಸಮುದಾಯ ಯಾವತ್ತೂ ಬೆಂಬಲಿಸುವುದಿಲ್ಲ. ಇದು ಅತ್ಯಂತ ಶ್ಲಾಘನೀಯ ಎಂದರು.
ಬೆಂಗಳೂರು: ಏಪ್ರಿಲ್.9ರಂದು ನಡೆಯಲಿರುವ ದಾವಣಗೆರೆ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಲಾಗಿದೆ. ಬಾಗಲಕೋಟೆ…
ಬೆಂಗಳೂರು: ಅಮೇರಿಕಾದಲ್ಲಿರುವ ಕನ್ನಡಿಗರ ಅತಿ ದೊಡ್ಡ ಸಾಂಸ್ಕೃತಿಕ ಸಂಭ್ರಮವಾಗಿರುವ ಅಕ್ಕ ವಿಶ್ವ ಕನ್ನಡ ಸಮ್ಮೇಳನ ರಾಯಭಾರಿಯಾಗಿ ನಟ ರಿಷಬ್ ಶೆಟ್ಟಿ…
ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯನ್ನು 48 ಗಂಟೆಯೊಳಗೆ ಸಂಪೂರ್ಣ ಓಪನ್ ಮಾಡಬೇಕು ಎಂದು ಇರಾನ್‌ಗೆ ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗಡುವು…
ಮೈಸೂರಿನ ಶಾರದಾದೇವಿ ನಗರದ ಸರ್ಕಲ್‌ನಲ್ಲಿ ಒಂದು ವರ್ಷದ ಹಿಂದೆ ಲಕ್ಷಾಂತರ ರೂ. ವೆಚ್ಚದಲ್ಲಿ ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಆದರೆ…
ರೈಲ್ವೆ ಇಲಾಖೆಯ ಕನ್ನಡ ವಿರೋಧಿ ನೀತಿ ಇನ್ನೊಮ್ಮೆ ಬಯಲಾಗಿದೆ. ನೇಮಕಾತಿ ಮತ್ತು ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯಲ್ಲಿ ಪರೀಕ್ಷೆ ನಡೆಸುವುದಾಗಿ ಭರವಸೆ…
ದಕ್ಷಿಣ ಕಾಶಿ ಎಂದೇ ಪ್ರಸಿದ್ಧವಾಗಿರುವ ನಂಜನಗೂಡಿನ ಶ್ರೀಕಂಠೇಶ್ವರ ದೇವಾಲಯದಲ್ಲಿ ಶ್ರೀಕಂಠೇಶ್ವರ ರಥೋತ್ಸವ ವಿಜೃಂಭಣೆಯಿಂದ ನಡೆಯುತ್ತಿದೆ. ಆದರೆ ಇದೇ ಮೊದಲ ಬಾರಿಗೆ…