ಬಳ್ಳಾರಿ: 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿ ಸಾಹಿತಿ ಡಾ.ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ.
ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಅಂತರಾಷ್ಟ್ರೀಯ ಮಟ್ಟದ ಬೂಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ.
ಇಂದು ಬಳ್ಳಾರಿಯಲ್ಲಿ ನಡೆದ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಬಾನುಮುಷ್ತಾಕ್ ಅವರ ಹೆಸರನ್ನು ಘೋಷಣೆ ಮಾಡಲಾಗಿದೆ.
ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಡಾ.ಮಹೇಶ್ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಮ್ಮೇಳನದ ಅಧ್ಯಕ್ಷರಾಗಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ.
ಇನ್ನು ಸಮ್ಮೇಳನ ನಡೆಯುವ ಸ್ಥಳ ಹಾಗೂ ದಿನಾಂಕ ಅಂತಿಮವಾಗಿಲ್ಲ. ಸ್ವಾಗತ ಸಮಿತಿ ಕೂಡ ರಚನೆಯಾಗಿಲ್ಲ. ಸರ್ಕಾರದಿಂದ ಅನುದಾನ ಕೂಡ ಖಾತ್ರಿಯಾಗಿಲ್ಲ. ಇದಕ್ಕೂ ಮೊದಲೇ ಈಗ ಸಮ್ಮೇಳನಾಧ್ಯಕ್ಷರನ್ನು ನೇಮಕ ಮಾಡಲಾಗಿದೆ.





