ರಾಜ್ಯ

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಹೆಸರು ಘೋಷಣೆ: ವಿಜಯೇಂದ್ರ ಹೇಳಿದ್ದಿಷ್ಟು.!

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟನೆಗೆ ಲೇಖಕಿ ಬಾನು ಮುಷ್ತಾಕ್‌ ಹೆಸರು ಘೋಷಣೆ ಮಾಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಈ ಕುರಿತು ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಅವರು ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಹೆಸರು ಘೋಷಣೆ ಮಾಡಿದ್ದಾರೆ. ಬಾನು ಮುಷ್ತಾಕ್ ಅವರು ಹಿಂದೂ ಪರಂಪರೆ, ಹಿಂದೂ ಆಚಾರ ವಿಚಾರಗಳ ಮೇಲೆ ನಂಬಿಕೆ ಇಟ್ಟು ಬಂದರೆ ಸ್ವಾಗತ ಮಾಡುತ್ತೇವೆ. ಬಾನು ಮುಷ್ತಾಕ್ ಹಾಗೂ ಕೊಡಗಿನ ದೀಪಾ ಬಸ್ತಿ ಇಬ್ಬರಿಗೂ ಸೇರಿ ಬೂಕರ್ ಪ್ರಶಸ್ತಿ ಬಂದಿದೆ. ಆದರೆ, ಸರ್ಕಾರ ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್ ಅವರನ್ನು ಮಾತ್ರ ಕರೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ದೀಪಾ ಬಸ್ತಿ ಅವರನ್ನು ಏಕೆ ಕರೆದಿಲ್ಲ? ಎಂದು ಪ್ರಶ್ನೆ ಮಾಡಿದರು.

ದೀಪಾ ಬಸ್ತಿ ಅವರನ್ನು ಏಕೆ ಕರೆಯಬೇಕು ಎಂಬ ಆಲೋಚನೆ ಸರ್ಕಾರಕ್ಕೆ ಬಂದಿಲ್ಲ? ಕೊಡಗಿನ ಬಗ್ಗೆ ಸಿಎಂಗೆ ಆಸಕ್ತಿ ಕಡಿಮೆ. ದಸರಾ ಧಾರ್ಮಿಕ ಸಂಪ್ರದಾಯ ಒಳಗೊಂಡ ಕಾರ್ಯಕ್ರಮ. ನಮಗೆ ಆಚಾರ ವಿಚಾರ, ಸಂಪ್ರದಾಯ ಎಲ್ಲವೂ ಗೊತ್ತಿದೆ ಎಂದು ಹೇಳಿದರು.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

2 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

3 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

5 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

5 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

6 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

6 hours ago