ಹುಬ್ಬಳ್ಳಿ: ಬಳ್ಳಾರಿಯ ಬಾಣಂತಿಯರ ಸಾವು ಪ್ರಕರಣದಲ್ಲಿ ಕಳಪೆ ಔಷಧಿ ಕೊಟ್ಟ ಕಂಪನಿ ವಿರುದ್ಧ ಕ್ರಮಕೈಗೊಳ್ಳಲಾಗಿದೆ. ಕಳಪೆ ಔಷಧಿ ನೀಡಿದ ಕಂಪನಿಯನ್ನು ಬ್ಲಾಕ್ ಲಿಸ್ಟ್‌ಗೆ ಸೇರಿಸಲು ಹೇಳಿದ್ದೇನೆ ಎಂದು ಸಿಎಂ ಸಿದ್ದಾರಾಮಯ್ಯ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡ್ರಗ್ ಕಂಟ್ರೋಲರ್ ಅನ್ನು ಅಮಾನತು ಮಾಡಲಾಗಿದೆ. ಈ ಪ್ರಕರಣವನ್ನು ತನಿಖೆ ಮಾಡಲು ಕಮಿಟಿ ರಚನೆ ಮಾಡಲಾಗಿದೆ. ಆ ಕಮಿಟಿ ವರದಿ ನೀಡಿದ ಬಳಿಕ ಕ್ರಮಕೈಗೊಳ್ಳುತ್ತೇವೆ. ಮೃತರ ಕುಟುಂಬಕ್ಕೆ ಐದು ಲಕ್ಷ ರೂ ಪರಿಹಾರ ನೀಡುತ್ತೇವೆ ಎಂದಿದ್ದಾರೆ.