Mysore
27
few clouds

Social Media

ಶನಿವಾರ, 21 ಫೆಬ್ರವರಿ 2026
Light
Dark

ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ: ರಾಜ್ಯದಲ್ಲಿ ಡಿ.18ರಿಂದ ಮತ್ತೆ ಮಳೆ ಮುನ್ಸೂಚನೆ

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತವಾಗಿದ್ದು, ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್.‌18ರಿಂದ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಮೈ ಕೊರೆವ ಚಳಿಯಿದ್ದು, ಇದರ ನಡುವೆ ಹವಾಮಾನ ಇಲಾಖೆ ಮಳೆ ಮುನ್ಸೂಚನೆ ನೀಡಿದೆ.

ವಾಯುಭಾರ ಕುಸಿತವಾದ ಪರಿಣಾಮ ದಕ್ಷಿಣ ಒಳನಾಡಿನ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗಿತ್ತು.

ಈಗ ಡಿಸೆಂಬರ್.‌18ರಿಂದ ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳಲ್ಲ ಮೋಡ ಕವಿದ ವಾತಾವರಣ ಇರಲಿದ್ದು, ಅಲ್ಲಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

Tags:
error: Content is protected !!