ಬೆಂಗಳೂರು : ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಬಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಮರಾಠಾವಾಡದಿಂದ ಕೊಮೋರಿನ್ ಪ್ರದೇಶದವರೆಗೆ ವಾಯುಭಾರ ಕುಸಿತವಾಗಿರುವ ಕಾರಣ ಕೇರಳ ಕರಾವಳಿಯ ಅರೇಬಿಯನ್ ಸಮುದ್ರದಲ್ಲಿ ಚಂಡಮಾರುತದ ಪ್ರಭಾವದಿಂದಾಗಿ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಪ್ರಮುಖವಾಗಿ ರಾಜ್ಯದ ವಿವಿಧ ಜಿಲ್ಲೆಗಳಾದ ಹಾವೇರಿ,ಧಾರವಾಡ, ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ರಾಮನಗರ, ಮಂಡ್ಯ, ದಾವಣಗೆರೆ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಗದಗ, ಕೊಪ್ಪಳ,ಮೈಸೂರು ಹಾಗೂ ಬೆಂಗಳೂರು ಗ್ರಾಮಾಂತರ ಭಾಗಗಳಲ್ಲಿ ಗಾಳಿ ಸಹಿತ ಸಾಮಾನ್ಯ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.