Mysore
20
clear sky

Social Media

ಬುಧವಾರ, 04 ಫೆಬ್ರವರಿ 2026
Light
Dark

ರಾಜ್ಯದ ಮುಖ್ಯಮಂತ್ರಿಯಾಗುವ ಅರ್ಹತೆ ನನಗೂ ಇದೆ: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌

ದಾವಣಗೆರೆ: ಕುಟುಂಬ ರಾಜಕಾರಣ ಹಾಗೂ ಭ್ರಷ್ಟಾಚಾರದ ವಿರುದ್ಧ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹೇಳಿದ್ದಾರೆ..

ಈ ಕುರಿತು ದಾವಣಗೆರೆಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯವನ್ನು ಭ್ರಷ್ಟಾಚಾರ ಮುಕ್ತ ಮಾಡುವ ಅಗತ್ಯವಿದೆ. ಇದಕ್ಕೆ ನಮ್ಮ ಪ್ರಯತ್ನ ಮಾಡುತ್ತಿದ್ದೇನೆ ಎಂದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕೇಂದ್ರ ಸಚಿವ ವಿ.ಸೋಮಣ್ಣ ಅವರ ಮನೆಯ ಗೃಹಪ್ರವೇಶವಿದೆ. ಅದಕ್ಕಾಗಿ ದೆಹಲಿಗೆ ಹೋಗುತ್ತಿದ್ದೇವೆ. ಅಲ್ಲಿ ಪಕ್ಷದ ವರಿಷ್ಠರನ್ನು ಭೇಟಿ ಮಾಡುತ್ತೇವೆ ಎಂದರು.

ಇನ್ನು ಶ್ರೀರಾಮುಲು ಯಾತ್ರೆ ಕೈಗೊಳ್ಳುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಪಕ್ಷದ ಒಡೆದ ಮನಸುಗಳನ್ನು ಒಂದುಗೂಡಿಸುವ ಅಗತ್ಯವಿದೆ. ಅವರ ಯಾತ್ರೆಯನ್ನು ಸ್ವಾಗತಿಸುತ್ತೇನೆ. ನನಗೂ ಕೂಡ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಸ್ಥಾನ ಹಾಗೂ ರಾಜ್ಯದ ಮುಖ್ಯಮಂತ್ರಿಯಾಗುವ ಅರ್ಹತೆ ಇದೆ ಎಂದು ಹೇಳಿದರು.

 

 

Tags:
error: Content is protected !!