ಕಲಬುರ್ಗಿ: ಸಿಎಂ ಸಿದ್ದರಾಮಯ್ಯ ಪಾಕಿಸ್ತಾನದ ಏಜೆಂಟ್ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ.
ಪಾಕಿಸ್ತಾನದ ಮೇಲೆ ಯುದ್ದ ಸಾರುವ ಅಗತ್ಯವಿಲ್ಲ ಎಂಬ ಸಿದ್ದರಾಮಯ್ಯ ಹೇಳಿಕೆಗೆ ಸಂಬಂಧಿಸಿದಂತೆ ಕಲಬುರ್ಗಿಯಲ್ಲಿ ಮಾತನಾಡಿದ ಅವರು, ರಾಜ್ಯದ ಸಿಎಂ ಆಗಿ, ಭಾರತದ ಪ್ರಜೆಯಾಗಿ ಹಿಂದೂಗಳನ್ನು ಟಾರ್ಗೆಟ್ ಮಾಡಿ ದಾಳಿ ನಡೆಸಿದರೂ ಅವರು ಹೀಗೆ ಹೇಳುತ್ತಾರೆ. ಹಾಗಾದ್ರೆ ಸಿದ್ದರಾಮಯ್ಯಗೆ ಹಿಂದೂಗಳು ವೋಟ್ ಹಾಕಿಲ್ವಾ ಎಂದು ಪ್ರಶ್ನೆ ಮಾಡಿದರು.
ಯುದ್ಧ ಬೇಕು, ಬೇಡ ಎಂಬುದು ಸಿದ್ದರಾಮಯ್ಯ ಅವರಿಗೆ ಸಂಬಂಧಿಸಿದ ವಿಚಾರವಲ್ಲ. ಅದನ್ನು ಪ್ರಧಾನಿ, ರಾಷ್ಟ್ರಪತಿ ಹಾಗೂ ಸೈನ್ಯ ನಿರ್ಧಾರ ಮಾಡುತ್ತದೆ. ದೇಶಕ್ಕೆ ಆಪತ್ತು ಬಂದಾಗ ಈ ರೀತಿ ಮಾತನಾಡೋದು ಸರಿಯಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದರು.
ಲಕ್ಷ್ಮೀಕಾಂತ್ ಕೊಮಾರಪ್ಪ ಶೀತಗಾಳಿಯಿಂದ ಪಾರಾಗಲು ಬೆಚ್ಚನೆಯ ಬಟ್ಟೆ, ಹೊದಿಕೆ, ಬೆಂಕಿಯ ಮೊರೆ ಸೋಮವಾರಪೇಟೆ: ಶೀತಗಾಳಿಯಿಂದ ಚಳಿಯ ಪ್ರಮಾಣ ಹೆಚ್ಚಾಗಿದ್ದು, ಕಳೆದೆರಡು…
ಕೊಳ್ಳೇಗಾಲ: ಶಾಸಕರು ಮೊದಲಿದ್ದ ಡಾಂಬರು ರಸ್ತೆಯನ್ನು ಕಿತ್ತು ಕಾಂಕ್ರೀಟ್ ರಸ್ತೆಯನ್ನಾಗಿ ಅಭಿವೃದ್ಧಿಪಡಿಸಲು ಮುಂದಾದರೆ ಗುತ್ತಿಗೆದಾರ ನಡೆಸಿದ ಕಳಪೆಕಾಮಗಾರಿಯಿಂದ ಜಲ್ಲಿಕಲ್ಲುಗಳು ಮೇಲೆದ್ದು…
ಹನಗೋಡು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆತಂಕ; ಜಮೀನಿಗೆ ತೆರಳಲು ಹಿಂದೇಟು ವೀರನಹೊಸಹಳ್ಳಿ: ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಹುಣಸೂರು ಬಫರ್…
ಹೊಸದಿಲ್ಲಿ: ಮಾಜಿ ಪ್ರಧಾನಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಹೆಚ್.ಡಿ. ದೇವೇಗೌಡರು ಶುಕ್ರವಾರ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ…
ವಿಧಾನಸಭೆ : ರಾಜ್ಯದಲ್ಲಿರುವ ಮಹಾನಗರಪಾಲಿಕೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಚಾಲಕರು, ಲೋಡರ್ ಗಳು, ತ್ಯಾಜ್ಯ ಸಂಗ್ರಹಕಾರರು ಸೇರಿದಂತೆ ಇನ್ನಿತರೆ…