ಬೆಂಗಳೂರು: ಶೀಘ್ರದಲ್ಲೇ ಶುಭಸುದ್ದಿ.! ಹೀಗಂತ ವಿಜಯಪುರದ ಬಿಜೆಪಿ ಉಚ್ಛಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಪೋಸ್ಟ್ ಹಾಕಿಕೊಂಡಿದ್ದು, ಇದು ನಾನಾ ವ್ಯಾಖ್ಯಾನಗಳಿಗೆ ಕಾರಣವಾಗಿದೆ.
ಶೀಘ್ರದಲ್ಲೇ ರಾಜ್ಯದ ಜನತೆಗೆ ಶುಭ ಸುದ್ದಿ ಎಂದು ಪೋಸ್ಟ್ ಮಾಡಿರುವ ಅವರು, ಅಲ್ಲದೇ ನಿಮ್ಮ ಫೈರ್ ಬ್ರಾಂಡ್ ಎಂದು ಬರೆದು ಕೊಂಡಿದ್ದಾರೆ. ಈ ಪೋಸ್ಟ್ ಇದೀಗ ಭಾರೀ ಕುತೂಹಲಕ್ಕೆ ಕಾರಣವಾಗಿದೆ. ಶುಭ ಸುದ್ದಿ ಅಂದರೆ ಯಾರಿಗೆ? ರಾಜ್ಯದ ಜನತೆಗೋ? ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೋ? ಅವರ ಅಭಿಮಾನಿಗಳಿಗೋ? ಅವರ ಬೆಂಬಲಿಗರಿಗೋ? ಎಂಬುದು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಪಕ್ಷದಿಂದ ಈಗಾಗಲೇ ಉಚ್ಚಾಟನೆ ಆಗಿರುವ ಯತ್ನಾಳ್, ಮತ್ತೆ ಬಿಜೆಪಿಗೆ ಮರಳುತ್ತಾರಾ? ಎಂಬ ಪ್ರಶ್ನೆ ಹುಟ್ಟುಹಾಕಿದ್ದು, ಯತ್ನಾಳ್ ಈ ಪೋಸ್ಟ್ ಭಾರೀ ಕುತೂಹಲಕ್ಕೆ ಕಾರಣವಾಗಿದೆ.



