ರಾಜ್ಯ

ಪಂಚಮಸಾಲಿ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಛಾಟನೆ

ಬಾಗಲಕೋಟೆ : ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ.

ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಈ ನಿರ್ಧಾರ ತೆಗೆದುಕೊಂಡಿದ್ದು, ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಅವರು, ಪಂಚಮಸಾಲಿ ಸಮುದಾಯದ ಪ್ರಥಮ‌ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಮಾಡಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದರು.

ಲಿಂಗಾಯತ ಧರ್ಮ ವಿರೋಧಿ ಹೇಳಿಕೆ, ಅಕ್ರಮ ಆಸ್ತಿ ಗಳಿಕೆ ಸೇರಿದಂತೆ ಸ್ವಾಮೀಜಿ ಮೇಲೆ ಹಲವು ಆರೋಪ ಹೊರಿಸಿ, ಪೀಠದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಅಸೂಟಿ ಹೇಳಿದರು.

ಭಾನುವಾರ ನಡೆದ ಸಭೆಯಲ್ಲಿ ಸ್ವಾಮೀಜಿಯನ್ನು ಉಚ್ಛಾಟಿಸುವ ನಿರ್ಣಯ ತೆಗೆದುಕೊಳ್ಳಲಾಯಿತು. ಸ್ವಾಮೀಜಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದು ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿದ್ದಾರೆ. ಈ ಬಗ್ಗೆ 2014ರಲ್ಲಿ ಸ್ವಾಮೀಜಿಗೆ ನೋಟಿಸ್ ನೀಡಿದ್ದೇವು ಎಂದು ನೀಲಕಂಠ ಅಸೂಟಿ ಹೇಳಿದರು.

ಆಂದೋಲನ ಡೆಸ್ಕ್

Recent Posts

ಚಾ.ನಗರ | ಟೊಮೆಟೊ ದರ ಕುಸಿತ; ರೈತರಿಂದ ಹೆದ್ದಾರಿ ತಡೆ

ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…

3 hours ago

ಪಂಜಾಬ್‌ | ಪಾಕ್‌ ಪೋಷಿತ ಉಗ್ರ ಘಟಕದ ಮೇಲೆ ದಾಳಿ, ಇಬ್ಬರ ಬಂಧನ

ಅಮೃತಸರ : ಪಂಜಾಬ್‌ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…

3 hours ago

ಅಮೆರಿಕದೊಂದಿಗೆ ಮಾತುಕತೆ ಇಲ್ಲ, ದೀರ್ಘಕಾಲದ ಯುದ್ಧಕ್ಕೆ ಸಿದ್ಧ ; ಇರಾನ್‌

ಹೊಸದಿಲ್ಲಿ : ಇರಾನ್‌ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆಯನ್ನು ತಳ್ಳಿ ಹಾಕಿರುವ…

3 hours ago

ನಂಜನಗೂಡು | ನಾಲೆಯಲ್ಲಿ ನವಜಾತ ಶಿಶು ಪತ್ತೆ

ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…

4 hours ago

ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆ ನಿವಾರಿಸಲು ಸರ್ಕಾರ ಬದ್ಧ : ಮುಖ್ಯಮಂತ್ರಿ

ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…

5 hours ago

ಮಹದೇಶ್ವರ ಬೆಟ್ಟ | ದಾಸೋಹ-ಲಾಡು ಪ್ರಸಾದಕ್ಕೆ ಸಿಲಿಂಡರ್ ಕೊರತೆ ಇಲ್ಲ ; ಅಪಪ್ರಚಾರಕ್ಕೆ ಕಿವಿಗೊಡದಿರಿ

ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…

6 hours ago