ಬಾಗಲಕೋಟೆ : ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿಯನ್ನು ಉಚ್ಛಾಟನೆ ಮಾಡಲಾಗಿದೆ.
ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ಸಮಾಜ ಟ್ರಸ್ಟ್ ಈ ನಿರ್ಧಾರ ತೆಗೆದುಕೊಂಡಿದ್ದು, ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ನೀಲಕಂಠ ಅಸೂಟಿ ಅವರು, ಪಂಚಮಸಾಲಿ ಸಮುದಾಯದ ಪ್ರಥಮ ಜಗದ್ಗುರು ಬಸವ ಜಯಮೃತ್ಯುಂಜಯ ಸ್ವಾಮೀಜಿ ಉಚ್ಚಾಟನೆ ಮಾಡಿರುವುದಾಗಿ ಮಾಧ್ಯಮಗಳಿಗೆ ತಿಳಿಸಿದರು.
ಲಿಂಗಾಯತ ಧರ್ಮ ವಿರೋಧಿ ಹೇಳಿಕೆ, ಅಕ್ರಮ ಆಸ್ತಿ ಗಳಿಕೆ ಸೇರಿದಂತೆ ಸ್ವಾಮೀಜಿ ಮೇಲೆ ಹಲವು ಆರೋಪ ಹೊರಿಸಿ, ಪೀಠದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಅಸೂಟಿ ಹೇಳಿದರು.
ಭಾನುವಾರ ನಡೆದ ಸಭೆಯಲ್ಲಿ ಸ್ವಾಮೀಜಿಯನ್ನು ಉಚ್ಛಾಟಿಸುವ ನಿರ್ಣಯ ತೆಗೆದುಕೊಳ್ಳಲಾಯಿತು. ಸ್ವಾಮೀಜಿ ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದು ಅಕ್ರಮವಾಗಿ ಆಸ್ತಿ ಗಳಿಕೆ ಮಾಡಿದ್ದಾರೆ. ಈ ಬಗ್ಗೆ 2014ರಲ್ಲಿ ಸ್ವಾಮೀಜಿಗೆ ನೋಟಿಸ್ ನೀಡಿದ್ದೇವು ಎಂದು ನೀಲಕಂಠ ಅಸೂಟಿ ಹೇಳಿದರು.
ಮೈಸೂರು : ದಸರಾ ಮಹೋತ್ಸವಕ್ಕೆ ಆರಂಭದ ಮುನ್ನುಡಿಯಂತಿರುವ ಯುವ ಸಂಭ್ರಮಕ್ಕೆ ಈ ಬಾರಿ ಮೈಸೂರಿನ ಮನೆ ಮಗ ಖ್ಯಾತ ಗಾಯಕ…
ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…
ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…
ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…
ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…
ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…