ಬೀದರ್ : ರೋಹಿತ್ ಚಕ್ರತೀರ್ಥ ನೇತೃತ್ವದಲ್ಲಿ ರಾಜ್ಯ ಸರ್ಕಾರ ಹೊರತಂದಿರುವ 9 ನೇ ತರಗತಿಯ ಪಠ್ಯಪುಸ್ತಕದಲ್ಲಿ ಬಸವಣ್ಣ ನವರುಗೆ ಅಮವಾನ ಮಾಡಲಾಗಿದೆ ಎಂದು ಖಂಡಿಸಿ ಜುಲೈ 15 ನೇ ತಾರೀಖಿನಂದು ಬಸವಣ್ಣನವರ ಅನುಯಾಯಿಗಳು ಹಾಗೂ ಕನ್ನಡಪರ ಸಂಘಟನೆಗಳು ಬೀದರ್ ಬಂದ್ ಗೆ ಕರೆ ನೀಡಿದ್ದಾರೆ.
9 ನೇ ತರಗತಿಯ ಪರಿಷ್ಕೃತ ಪಠ್ಯವನ್ನು ಜುಲೈ 11 ರ ಒಳಗೆ ಹಿಂಪಡೆಯುವಂತೆ ಎಚ್ಚರಿಕೆಯನ್ನು ನೀಡಿವೆ. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡುವುದಾಗಿ ತಿಳಿಸಿವೆ.