ಬೆಂಗಳೂರು: ಈಗಿನ 9ನೇ ತರಗತಿಯ ಸಮಾಜ ವಿಜ್ಞಾನ-1 ಪರಿಷ್ಕೃತ ಪಠ್ಯದಲ್ಲಿ ಬಸವಣ್ಣನವರ ನೈಜ ಚರಿತ್ರೆ ಅಳವಡಿಸಿದ ಹಿನ್ನೆಲೆಯಲ್ಲಿ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಸಿಎಂ ಸಿದ್ದರಾಮಯ್ಯರಿಗೆ ಪತ್ರದ ಮೂಲಕ ಕೃತಜ್ಞತೆ ಸಲ್ಲಿಸಲಾಗಿದೆ.
ಬಸವಣ್ಣನವರ ಘನ ಬದುಕಿಗೆ ಹಾಗೂ ಇತಿಹಾಸಕ್ಕೆ ಚ್ಯುತಿ ಬಾರದಂತೆ ಎಳೆ ಮಕ್ಕಳಿಗೆ ಅರ್ಥವಾಗುವ ಭಾಷೆಯಲ್ಲಿಯೇ ಬರೆದಿದ್ದಾರೆ. ಇದೊಂದು ಚರಿತ್ರಾರ್ಹ ಬೆಳವಣಿಗೆ ಎಂದು ಸಿಎಂ ಸಿದ್ದರಾಮಯ್ಯರಿಗೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಕೃತಜ್ಞತೆ ಸಲ್ಲಿಸಲಾಗಿದೆ.
ಬಸವಣ್ಣನವರು ನಿಜಾರ್ಥದಲ್ಲಿ ಜಾತ್ಯಾತೀತ ನಾಯಕರೆಂಬುದು ಪಠ್ಯ ಪರಿಷ್ಕರಣಾ ತಜ್ಞರು ಇತಿಹಾಸ, ಸಂವಿಧಾನ ಪ್ರಜ್ಞೆ ಜನಪರ ಕಾಳಜಿಗೆ ಸಾಕ್ಷಿ. ಬಸವಣ್ಣನವರ ಈ ಪಠ್ಯ ಅಳವಡಿಸಿದ ಸಿಎಂ ಸಿದ್ದರಾಮಯ್ಯನವರು ಮತ್ತು ಪಠ್ಯ ಪರಿಷ್ಕರಣ ಸಮಿತಿಗೆ ಕೃತಜ್ಞತೆಗಳನ್ನು ಸಲ್ಲಿಸಲಾಗಿದೆ.
9ನೇ ತರಗತಿಯ ಸಮಾಜ ವಿಜ್ಞಾನ-1 ಪರಿಷ್ಕೃತ ಶಾಲಾ ಪಠ್ಯಪುಸ್ತಕದಲ್ಲಿ ಬಸವಣ್ಣನವರ ಪರಿಚಯದಲ್ಲಿ ಕೆಲ ತಪ್ಪು ಮಾಹಿತಿಗಳನ್ನು ನೀಡಲಾಗಿತ್ತು. ಹೀಗಾಗಿ ಇತ್ತೀಚೆಗೆ ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ತೆ ಅಸಮಾಧಾನ ವ್ಯಕ್ತಪಡಿಸಿತ್ತು. ಅಷ್ಟೇ ಅಲ್ಲದೇ ಅದನ್ನು ಸರಿಪಡಿಸುವಂತೆ ಸಿಎಂ ಸಿದ್ದರಾಮಯ್ಯಗೆ ಸಂಸ್ಥೆ ಪರವಾಗಿ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿಗಳು ಕೂಡ ಪತ್ರ ಬರೆದಿದ್ದರು.
ಸದ್ಯ ಬಸವಣ್ಣನವರ ನೈಜ ಚರಿತ್ರೆಯನ್ನು 9ನೇ ತರಗತಿಯ ಸಮಾಜ ವಿಜ್ಞಾನ-೧ ಪರಿಷ್ಕೃತ ಶಾಲಾ ಪಠ್ತಪುಸ್ತಕದಲ್ಲಿ ಅಳವಡಿಸಲಾಗಿದೆ. ಹೀಗಾಗಿ ಸಿದ್ದರಾಮಯ್ಯಗೆ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದಿಂದ ಸಿಎಂಗೆ ಕೃತಜ್ಞತೆ ಸಲ್ಲಿಸಲಾಗಿದೆ.