Mysore
26
overcast clouds

Social Media

ಶುಕ್ರವಾರ, 25 ಏಪ್ರಿಲ 2025
Light
Dark

ಶಿಗ್ಗಾಂವಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಾಜಿ ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಲೋಕಸಭಾ ಸದಸ್ಯರಾದ ಬಸವರಾಜ ಬೊಮ್ಮಾಯಿ ಅವರು ತಮ್ಮ ಶಾಸಕ ಸ್ಥಾನಕ್ಕೆ ಶನಿವಾರ (ಜೂನ್‌.15) ರಾಜೀನಾಮೆ ನೀಡಿದರು.

ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಬೆನ್ನಲ್ಲೇ ತಮ್ಮ ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಸಭಾಧ್ಯಕ್ಷ ಯುಟಿ ಖಾದರ್‌ ಅವರನ್ನು ವಿಧಾನಸೌಧದ ಮೊದಲನೇ ಮಹಡಿಯಲ್ಲಿರುವ ಸ್ಪೀಕರ್‌ ಕಚೇರಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.

ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸತತ ನಾಲ್ಕು ಬಾರಿ ಜಯಗಳಿಸಿದ್ದ ಅವರು ಸಿಎಂ ಆಗಿಯೂ ಅಧಿಕಾರ ಪಡೆದಿದ್ದರು. ಇದೇ ಮೊದಲ ಬಾರಿಗೆ ಹಾವೇರಿ-ಗದಗದಿಂದ ಸ್ಪರ್ಧೇ ಮಾಡಿದ್ದ ಬೊಮ್ಮಾಯಿ ಕಾಂಗ್ರೆಸ್‌ ಪಕ್ಷದ ಆನಂದಸ್ವಾಮಿ ಗಡ್ಡದೇವರಮಠ ವಿರುದ್ಧ 43 ಸಾವಿರ ಮತಗಳ ಅಂತರದಿಂದ ಗೆಲುವು ದಾಖಲಿಸಿ ಲೋಕಸಭೆಗೆ ಎಂಟ್ರಿ ಕೊಟ್ಟಿದ್ದಾರೆ.

ಇನ್ನು ಹಾವೇರಿ-ಗದಗ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬೊಮ್ಮಾಯಿ 7,05,538 ಮತ ಪಡೆದರೆ, ಆನಂದಸ್ವಾಮಿ 6,62,025 ಮತ ಪಡೆದರು. ಅಂತಿಮವಾಗಿ ಬಸವರಾಜ ಬೊಮ್ಮಾಯಿ 43,513 ಮತಗಳ ಅಂತರದಿಂದ ಗೆದ್ದು ಬೀಗಿದ್ದರು.

https://x.com/ANI/status/1801858017207664682

Tags: