ಬೆಂಗಳೂರು: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹಾಗೂ ಲೋಕಸಭಾ ಸದಸ್ಯರಾದ ಬಸವರಾಜ ಬೊಮ್ಮಾಯಿ ಅವರು ತಮ್ಮ ಶಾಸಕ ಸ್ಥಾನಕ್ಕೆ ಶನಿವಾರ (ಜೂನ್.15) ರಾಜೀನಾಮೆ ನೀಡಿದರು.
ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಬೆನ್ನಲ್ಲೇ ತಮ್ಮ ಶಿಗ್ಗಾಂವಿ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಸಭಾಧ್ಯಕ್ಷ ಯುಟಿ ಖಾದರ್ ಅವರನ್ನು ವಿಧಾನಸೌಧದ ಮೊದಲನೇ ಮಹಡಿಯಲ್ಲಿರುವ ಸ್ಪೀಕರ್ ಕಚೇರಿಯಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಸತತ ನಾಲ್ಕು ಬಾರಿ ಜಯಗಳಿಸಿದ್ದ ಅವರು ಸಿಎಂ ಆಗಿಯೂ ಅಧಿಕಾರ ಪಡೆದಿದ್ದರು. ಇದೇ ಮೊದಲ ಬಾರಿಗೆ ಹಾವೇರಿ-ಗದಗದಿಂದ ಸ್ಪರ್ಧೇ ಮಾಡಿದ್ದ ಬೊಮ್ಮಾಯಿ ಕಾಂಗ್ರೆಸ್ ಪಕ್ಷದ ಆನಂದಸ್ವಾಮಿ ಗಡ್ಡದೇವರಮಠ ವಿರುದ್ಧ 43 ಸಾವಿರ ಮತಗಳ ಅಂತರದಿಂದ ಗೆಲುವು ದಾಖಲಿಸಿ ಲೋಕಸಭೆಗೆ ಎಂಟ್ರಿ ಕೊಟ್ಟಿದ್ದಾರೆ.
ಇನ್ನು ಹಾವೇರಿ-ಗದಗ ಕ್ಷೇತ್ರದಿಂದ ಸ್ಪರ್ಧಿಸಿದ್ದ ಬೊಮ್ಮಾಯಿ 7,05,538 ಮತ ಪಡೆದರೆ, ಆನಂದಸ್ವಾಮಿ 6,62,025 ಮತ ಪಡೆದರು. ಅಂತಿಮವಾಗಿ ಬಸವರಾಜ ಬೊಮ್ಮಾಯಿ 43,513 ಮತಗಳ ಅಂತರದಿಂದ ಗೆದ್ದು ಬೀಗಿದ್ದರು.
ದಾ.ರಾ. ಮಹೇಶ್ ವೀರನಹೊಸಹಳ್ಳಿ: ತಾಲ್ಲೂಕಿನ ಬನ್ನಿಕುಪ್ಪೆಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಿತ್ಯ ಅವರೆಕಾಯಿ ಮಾರಾಟದಿಂದಾಗಿ ಟ್ರಾಫಿಕ್ ಜಾಮ್ ಆಗುತ್ತಿದ್ದು, ವಾಹನಗಳ ಸಂಚಾರಕ್ಕೆ…
ಮಂಡ್ಯ: ಇಂದಿನಿಂದ ( ಡಿಸೆಂಬರ್ 20 ) ಮೂರು ದಿನಗಳ ಕಾಲ ನಡೆಯಲಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಚಾಲನೆ…
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…